ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಪ್ರತಿಭಟನೆ ನಡೆಸುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್ ಅಹಿಂದ ಮುಖಂಡ ಕೆ.ಎಸ್.ಶಿವರಾಂ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮೈಸೂರಿನಲ್ಲಿ ಕೆಡಿಪಿ ಸಭೆಯನ್ನು ಮುಂದೂಡಲಾಗಿತ್ತು. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕಾಗಿದೆ. ಈ ನಡುವೆ ರಾಜಕೀಯ ಕೆಸರೆರೆಚಾಟದಿಂದ ಬಿಜೆಪಿಯವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆಡಿಪಿ ಸಭೆಗೆ ಅಡ್ಡಿ ಪಡಿಸಲು ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಕೆಡಿಪಿ ಸಭೆಯನ್ನು ಮಾಡುತ್ತಿರುವುದು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಿ, ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಜಾರಿಗೆ ತರಲು. ಆದರೆ ಬಿಜೆಪಿಯವರು ಸಭೆ ನಡೆಯದಂತೆ ಮಾಡಿ ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದಲ್ಲೇ ಸ್ವತಃ ಭ್ರಷ್ಟಾಚಾರದ ಪಿತಾಮಹಾರನ್ನು ಇಟ್ಟುಕೊಂಡಿದ್ದಾರೆ. ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಭ್ರಷ್ಟಾಚಾರಿಗಳಾಗಿದ್ದಾರೆ. ಅವರೇ ಬೇನಾಮಿ ಆಸ್ತಿಗಳನ್ನು ಮಾಡಿಕೊಂಡಿದ್ದಾರೆ. ಇದಕ್ಕೆ ಮೈಸೂರಿನಲ್ಲಿ ಬೆಂಬಲ ನೀಡಿದವರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಮಹದೇವ್ ಸ್ವಾಮಿ. ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚ್ಯಾ. ಈ ಇಬ್ಬರ ಹೆಸರಿನಲ್ಲಿಯೇ ಬೇನಾಮಿ ಆಸ್ತಿಗಳನ್ನು ಮಾಡಿದ್ದಾರೆ ಎಂದು ಈ ಹಿಂದೆ ಮಾಡಿದ್ದ ಪತ್ರಿಕಾಗೋಷ್ಠಿಗಳಲ್ಲಿ ನಿರೂಪಿದ್ದೇನೆ ಎಂದು ಹೇಳಿದರು.
ಒಬ್ಬ ನೀತಿಗೆಟ್ಟ ಭ್ರಷ್ಠಾಚಾರ ಪಿತಾಮಹರಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಅವರ ಪಕ್ಷದವರಿಗೆ ಯಾರಿಗಾದರೂ ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡಬೇಕು ಎಂದು ಕೇಳುವ ಯಾವ ನೈತಿಕತೆ ಇಲ್ಲ. ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರನ್ನು ನೇರವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಏಕೆಂದರೆ ಸಿಎಂ ರಾಜ್ಯದಲ್ಲಿ ಜಾತಿ ಗಣತಿಯನ್ನು ಸ್ವೀಕಾರ ಮಾಡಿ, ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಇದನ್ನು ಅಂತ್ಯಗೊಳಿಸಲು ಬಿಜೆಪಿ ಹಾಗೂ ಜಾ.ದಳ ಪಕ್ಷಗಳು ಹುನ್ನಾರ ಮಾಡಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಿದರು.
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…