ಮೈಸೂರು ನಗರ

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ ಎಂಬ ಕಾರ್ಯಕ್ರಮ ಜಾರಿ ಮಾಡಿದ್ದಾರೆ.

ಇದರ ಅಡಿ ಪೊಲೀಸ್ ಇಲಾಖೆಯ 8277948080 ಎಂಬ ವಾಟ್ಸ್ ಆಪ್ ನಂಬರ್ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕರು ತಮ್ಮ ಸುತ್ತ ಮುತ್ತ ನಡೆಯುತ್ತಿರುವ ಮಾದಕ ವಸ್ತು ಸೇವನೆ ಮತ್ತು ಮಾರಾಟದ ಮಾಹಿತಿಯನ್ನು ಸದರಿ ನಂಬರ್‌ಗೆ ವಾಟ್ಸ್ ಆಪ್ ಮಾಡಬಹುದು. ಸದರಿ ಮಾಹಿತಿ ಮೇಲೆ ಪೊಲೀಸರು ಕ್ರಮ ವಹಿಸಲಿದ್ದಾರೆ. ಮಾಹಿತಿ ನೀಡಿದ ಮಾಹಿತಿದಾರರ ಗುರುತನ್ನು ರಹಸ್ಯವಾಗಿರಿಸಲು ಪೊಲೀಸರು ತೀರ್ಮಾನಿಸಿದ್ದಾರೆ.

ಸಿದ್ದಾರ್ಥ ನಗರ ಸಂಚಾರ ಪೊಲೀಸ್ ಠಾಣೆಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಈ ಹೊಸ ಕಾರ್ಯಕ್ರಮದ ಪೋಸ್ಟರ್‌ನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಆ ಮೂಲಕ ಡ್ರಗ್ಸ್ ಮುಕ್ತ ಮೈಸೂರಿಗೆ ಮುನ್ನುಡಿ ಬರೆದರು.

ಸಾರ್ವಜನಿಕರು ಸಹಕರಿಸಬೇಕು : ಲಾಟ್ಕರ್‌
‘ಡ್ರಗ್ಸ್ ಮುಕ್ತ ಮೈಸೂರು ಮಾಡುವ ಸಂಬಂಧ ನಮ್ಮ ಇಲಾಖೆ ವತಿಯಿಂದ ಮೈಸೂರು ನಗರದಲ್ಲಿ ಅನೇಕ ಅರಿವು ಕಾರ್ಯಕ್ರಮ ಮಾಡಿದ್ದೇವೆ. ಸಾರ್ವಜನಿಕರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು. ಪಾಲಕರು, ಶಿಕ್ಷಕರು ಮಕ್ಕಳ ಬಗ್ಗೆ ನಿಗಾವಹಿಸಬೇಕು. ನಿತ್ಯ ಅವರ ಚಲನವಲನದ ಬಗ್ಗೆ ಗಮನಿಸಬೇಕು. ಡ್ರಗ್ಸ್‌ನಿಂದ ಅನೇಕರು ಬಲಿಯಾಗಿದ್ದಾರೆ. ಈ ಸಂಬಂಧ ನಮ್ಮ ಇಲಾಖೆಯಿಂದ ಒಂದು ವಾಟ್ಸ್ ಆಪ್ ನಂಬರ್ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಡ್ರಗ್ಸ್ ಸಂಬಂಧ ಸದರಿ ನಂಬರ್ ಮೂಲಕ ಮಾಹಿತಿ ನೀಡಬುದಾಗಿದೆ. ಎಲ್ಲರೂ ಸಹ ಪೊಲೀಸ್ ಇಲಾಖೆ ಜೊತೆ ಕೈ ಜೋಡಿಸಬೇಕು’ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago