ಮೈಸೂರು ನಗರ

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್ ಅಭಿಮಾನಿಗಳು ಆಚರಿಸಿದರು.

ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಅರಮನೆಯ ಮುಂಭಾಗದ ಡಾ.ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೇರು ನಟನನ್ನು ಸ್ಮರಿಸಲಾಯಿತು.

ಈ ವೇಳೆ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಪಾರ್ಥ ಸಾರಥಿ ಮಾತನಾಡಿ, ಅರಮನೆ ಮುಂಭಾಗದ ಡಾ.ವಿಷ್ಣುವರ್ಧನ್‌ ಉದ್ಯಾನವನ್ನು ರಾಜ್ಯ ಸರ್ಕಾರ ಮತ್ತು ನಗರಪಾಲಿಕೆ ಅಧಿಕೃತವಾಗಿ ಘೋಷಿಸಿ ಅಭಿವೃದ್ಧಿ ಮಾಡಬೇಕು. ಉದ್ಯಾನವನದಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆ ಸ್ಥಾಪಿಸಬೇಕು. ಲಕ್ಷಾಂತರ ಮಂದಿ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ. ವಿಷ್ಣುವರ್ಧನ್ ವಿಶ್ವವಿಖ್ಯಾತರಾಗಿರುವ ಕಾರಣ ಉದ್ಯಾನವನಕ್ಕೆ ಭೇಟಿ ಕೊಡುತ್ತಾರೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತದೆ. ಪ್ರವಾಸೋದ್ಯಮಕ್ಕೆ ಸಹಕಾರಿಯಾಗಿ ನೂರಾರು ಮಂದಿಗೆ ಕೆಲಸ ಸಿಗುತ್ತದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸತೀಶ್, ಆಲ್ವಿನ್, ಮಹದೇವ್, ಬಸವರಾಜು, ಲಕ್ಷ್ಮಣ, ಕುಮಾರ, ರಮೇಶ್ ಇನ್ನಿತರರು ಹಾಜರಿದ್ದರು.

ಜನ ಮಾನಸದಲ್ಲಿ ಅಚ್ಚಹಸಿರು:
ನಗರದ ದೇವರಾಜ ಅರಸು ರಸ್ತೆಯಲ್ಲಿ ಅಲಯನ್ಸ್ ಕ್ಲಬ್ ಅಫ್ ಮೈಸೂರು ನಾಲ್ವಡಿ ವತಿಯಿಂದ ಡಾ.ವಿಷ್ಣುವರ್ಧನ್ 16ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲಿಸಲಾಯಿತು.

ಈ ವೇಳೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಸಾಹಸಸಿಂಹ, ಕನ್ನಡಿಗರ ಕಣ್ಮಣಿ ಡಾ.ವಿಷ್ಣುವರ್ಧನ್ ಮಾನವೀಯ ಮೌಲ್ಯಗಳ ಹರಿಕಾರರಾಗಿ, ಉತ್ತಮ ನಟನೆಯ ಮೂಲಕ ಜನ ಮಾನಸದಲ್ಲಿ ಇನ್ನು ಅಚ್ಚ ಹಸಿರಾಗಿದ್ದಾರೆ. ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದಾರೆ ಎಂದರು.

ವಾಣಿಜ್ಯ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಲಿಂಗರಾಜು, ಅಲಯನ್ಸ್ ಕ್ಲಬ್ ಅಫ್ ಮೈಸೂರು ನಾಲ್ವಡಿ ಬೆಟ್ಟೇಗೌಡ, ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ, ನರಸಿಂಹರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಂಜು, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಸಂದೇಶ್ ಪವಾರ್, ವಸಂತ ಮನೀಶ್, ಮೋಹಿತ್ ಗೌಡ, ಉಮೇಶ್, ಯಶವಂತ್, ವಿನೋದ್ ಅರಸ್, ಪ್ರಕಾಶ್, ಶ್ರೀನಿವಾಸ್, ಗೋಪಾಲ್ ಇದ್ದರು.

ಮೈಸೂರಿನ ಹೊರಹೊಲಯದಲ್ಲಿರುವ ವಿಷ್ಣು ಸ್ಮಾರಕದಲ್ಲೂ ವಿಶೇಷ ಪೂಜೆ ಮಾಡಿ ಸ್ಮರಿಸಲಾಯಿತು. ಇನ್ನೂ ನಗರದದ್ಯಾಂತ ವಿಶೇಷ ಪೂಜೆ, ರಕ್ತದಾನ ಮತ್ತು ಅನ್ನದಾನ ಶಿಬಿರಗಳು ನಡೆದವು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago