ಮೈಸೂರು: ಸಿಎಂ ಸಿದ್ದರಾಮಯ್ಯ ತಮಗೆ ೬೨ ಕೋಟಿ ಬರಬೇಕು ಅಂತಾರೆ ನನಗೆ ಅರ್ಥವಾಗ್ತಿಲ್ಲ. ಇದು ಯಾವ ತರಹದ ಲೆಕ್ಕ. ೬೨ ಕೋಟಿ ರೂ ಅನ್ನೋದು ಕಡ್ಲೆ ಕಾಯಿ ಬೀಜವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾಕೆ ಮಣ್ಣಿನ ಹಿಂದೆ ಹೋಗುತ್ತಿದ್ದಾರೆ ಗೊತ್ತಿಲ್ಲ. ಹಣಕಾಸು ಸಚಿವರಾದ್ರೂ ಹೀಗೆ ಮಾತನಾಡಿದ್ರೆ ಹೇಗೆ..? ಸಿಎಂ ಸಿದ್ದರಾಮಯ್ಯ ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಡಲಿ. ಅದೇ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತದೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ. ಯಾಕೆ ಮಾನ ಮರ್ಯಾದೆ ಬೀದಿ ಬೀದಿಯಲ್ಲಿ ಕಳೆದು ಕೊಳ್ತಾ ಇದ್ದೀರಾ. ಈ ಹಗರಣ ನ್ಯಾಯಾಂಗ ತನಿಕೆಗೆ ಒಪ್ಪಿಸಿ ಅಂತ ನಿಮ್ಮ ಶಿಷ್ಯರು ಸಲಹೆ ಕೊಡುತ್ತಿದ್ದಾರೆ. ನ್ಯಾಯಾಂಗ ತನಿಖೆಯಿಂದ ಯಾವ ಪ್ರಯೋಜನವಿಲ್ಲ. ಈ ಹಗರಣ ಸಿಬಿಐಗೆ ಕೊಡಿ ಸಾವಿರಾರು ಕೋಟಿ ರೂ ಹಗರಣ ಇದು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಪತ್ನಿ ಖರೀದಿಸಿರುವ ದೇವನೂರು ಬಡಾವಣೆ ಜಾಗ ದಲಿತರಿಗೆ ಸೇರಿದ್ದು, ಜವರ ಎಂಬ ವ್ಯಕ್ತಿಗೆ ಸೇರಿದ ಜಮೀನು ಇದು. ಡಿನೋಟಿಫೈ ಆದ ಜಾಗವನ್ನು ಸಿಎಂ ಪತ್ನಿಯ ಅಣ್ಣ ಖರೀದಿ ಮಾಡಿದ್ದರಿ. ದಾನ ಪತ್ರವಾಗಿ ೨೦೧೦ ರಲ್ಲಿ ಸಿಎಂ ಪತ್ನಿ ಹೆಸರಿಗೆ ಬಂದಿದೆ. ಸಮಾಜವಾದಿ ಮನಸ್ಸಿನ ಸಿದ್ದರಾಮಯ್ಯ ಯಾಕೆ ಈ ರೀತಿ ಮಣ್ಣಿನ ಹಿಂದೆ ಹೋಗುವ ರೀತಿ ಬದಲಾವಣೆ ಆದ್ರು..? ನೀವು ನಿಮ್ಮ ಅವಧಿಯಲ್ಲಿ ಒಂದು ಸೈಟ್ ಆದ್ರು ಜನಸಾಮಾನ್ಯರಿಗೆ ಕೊಡಿಸಿದ್ದೀರಾ ಎಂದು ಸಿಎಂ ವಿಶ್ವನಾಥ್ ಪ್ರಶ್ನೆ ಮಾಡಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…