ಮೈಸೂರು : ಆರೋಗ್ಯ ಕೇಂದ್ರವನ್ನು ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ನಗರ ಪ್ರದೇಶದ ಹೊರವಲಯಕ್ಕೆ ಮಂಜೂರು ಮಾಡಲಾಗಿದ್ದು, ಏಕಲವ್ಯ ನಗರದ ಆರೋಗ್ಯ ಕೇಂದ್ರಕ್ಕೆ ಜನಸಾಮಾನ್ಯ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ತಿಳಿಸಿದರು.
ಮೈಸೂರು ಗ್ರಾಮಾಂತರ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಏಕಲವ್ಯ ನಗರದಲ್ಲಿ ನೂತನವಾಗಿ ಪ್ರಾರಂಭವಾದ “ನಮ್ಮ ಕ್ಲಿನಿಕ್”ನ್ನು ಶುಕ್ರವಾರ ದೀಪ ಬೆಳಗಿಸಿ ಉದ್ಘಾಟನೆ ಮಾಡುವುದರ ಮೂಲಕ ಕೇಂದ್ರಕ್ಕೆ ಚಾಲನೆ ನೀಡಿದರು.
ಇದನ್ನು ಓದಿ: Udupi | ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಪಿ.ಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ಈಗಾಗಲೇ 14 ಕೇಂದ್ರಗಳ ಪ್ರಾರಂಭವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕ ಅನುಕೂಲಕ್ಕೆ ಅನುಗುಣವಾಗಿ ‘ನಮ್ಮ ಕ್ಲಿನಿಕ್’ಗಳನ್ನು ಪ್ರಾರಂಬಿಸಲಾಗುತ್ತಿದೆ ಹಾಗೂ ಸದರಿ ನಮ್ಮ ಕ್ಲಿನಿಕ್ ನಲ್ಲಿ ಮಾರ್ಗಸೂಚಿ ಅನುಸಾರ ಸುಮಾರ 12 ವಿವಿಧ ಆರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದು ತಿಳಿಸಿ ಸಾರ್ವಜನಿಕರ ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದರು.





