ಮೈಸೂರು ನಗರ

ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌

ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದ್ದು, ಬಿಜೆಪಿ EVMನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್‌ಗಳ ಪೈಕಿ 292 ಬೂತ್‌ಗಳಲ್ಲಿ ಮತಗಳ್ಳತನ ಆಗಿದ್ದು, 292 ಇವಿಎಂ ಯಂತ್ರದಲ್ಲಿ ರಿಗ್ಗಿಂಗ್ ಆಗಿದೆ.

292 ಬೂತ್‌ಗಳಲ್ಲಿ 1 ಲಕ್ಷದ 45 ಸಾವಿರ ಮತಗಳಿದ್ದು ಅದರಲ್ಲಿ 22 ಸಾವಿರ ಮತ ಮಾತ್ರ ಕಾಂಗ್ರೆಸ್‌ಗೆ ಬಂದಿವೆ. ಕಳೆದ ನಾಲ್ಕು ಚುನಾವಣೆಯಲ್ಲಿ ಇದೇ ಬೂತ್‌ಗಳಲ್ಲಿ ಕಾಂಗ್ರೆಸ್ ಗೆ ಶೇಕಡಾ 50 – 60 ಮತಗಳು ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆ ಕಾಂಗ್ರೆಸ್ ಕಾರ್ಯಕರ್ತರದ್ದೇ ಆಗಿದೆ. ಅಲ್ಲಿ ಒಟ್ಟು 750 ಮತಗಳಿವೆ. ಆದರೆ ಕಾಂಗ್ರೆಸ್‌ಗೆ ಬಂದಿದ್ದು ಬರೀ ಏಳು ಮತ ಮಾತ್ರ. ಎನ್.ಆರ್.ಕ್ಷೇತ್ರದ ಶಾಂತಿ ನಗರದಲ್ಲೂ ಇದೇ ರೀತಿ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.

ಆಂದೋಲನ ಡೆಸ್ಕ್

Recent Posts

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

18 mins ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

28 mins ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

1 hour ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

2 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

2 hours ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago