ಮೈಸೂರು ; ದಲಿತರಿಗೆ ಮೀಸಲಿಟ್ಟಿರುವ SCP-TSP ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ಖಂಡಿಸಿ ಮೈಸೂರು ವಿವಿ ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅಧ್ಯಕ್ಷ ಸಚಿನ್ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿದೆ. ಇದಲ್ಲದೆ ಕಲ್ಯಾಣ ಇಲಾಖೆ ವತಿಯಿಂದ ಶೇಕಡ 60 ಕ್ಕಿಂತ ಹೆಚ್ಚಿನ ಅಂಕ ಪಡೆದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಪ್ರಸಕ್ತ ಸಾಲಿನಿಂದ ಶೇಕಡ 75 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುವಂತೆ ಆದೇಶ ಹೊರಡಿಸಿದೆ. ಇಂದರಿಂದಾಗಿ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಕಾಲೇಜುಗಳ ಪ್ರವೇಶಾತಿ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಮುಂಗಡ ಶುಲ್ಕ ಕಟ್ಟದೆಯೇ ಪ್ರವೇಶ ಪಡೆಯಬಹುದು ಎಂದು ಆದೇಶ ಹೊರಡಿಸಿದ್ದರು, ಎಷ್ಟು ಕಾಲೇಜುಗಳಲ್ಲಿ ಈ ಆದೇಶ ಜಾರಿಯಲ್ಲಿದೆ ಹೇಳಿ ಎಂದು ಪ್ರಶ್ನಿಸಿದರು. ಅಲ್ಲದೆ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ದಲಿತ ವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ನವೀನ್ ಕೋಳೂರು,ಗಿರೀಶ್ ಬೆಂಡರವಾಡಿ,ಮುತ್ತುರಾಜ್,ರೋಹಿತ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…