ಮೈಸೂರು: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಗಾಗಿ ನಡಿಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.
ಇದನ್ನು ಓದಿ: ಸಾಲುಮರದ ತಿಮ್ಮಕ್ಕ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ: ಸಚಿವ ಈಶ್ವರ್ ಖಂಡ್ರೆ
ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಆವರಣದಿಂದ ಆರಂಭಗೊಂಡ ವಾಕಥಾನ್ ಮಹಾರಾಜ ಕಾಲೇಜು ಮೈದಾನದವರೆಗೆ ನಡೆಯಿತು.
ಈ ವೇಳೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ದೇಶವನ್ನು ಒಗ್ಗೂಡಿಸುವಲ್ಲಿ ವಲ್ಲಭಭಾಯ್ ಪಟೇಲ್ ಅವರು ನೀಡಿದ ಕೊಡುಗೆ ಅಪಾರ ಎಂದು ಹೇಳಿದರು.
ವಾಕಥಾನ್‌ನಲ್ಲಿ ನೂರಾರು ಯುವ ಸಮುದಾಯದವರು ಭಾಗಿಯಾಗಿದ್ದರು.





