ಮೈಸೂರು : ಇಲ್ಲಿನ ಶಿವರಾಂಪೇಟೆಯ ಶೃಂಗಾರ ಹೋಟೆಲ್ ಹತ್ತಿರ ಇರುವ ಮನ್ನಾರ್ ಕೃಷ್ಣಶೆಟ್ಟಿ ಹಾಸ್ಟೆಲ್ ಗೋಡೆಗೆ ವಕ್ಫ್ ಆಸ್ತಿ ಎಂದು ನೋಟಿಸ್ ಅಂಟಿಸಲಾಗಿದೆ. ಸದ್ಯ ಈ ವಿಚಾರವಾಗಿ ಹಾಸ್ಟೆಲ್ ಮುಂಭಾಗ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ ಕನ್ನಡ ಪರ ಹೋರಾಟಗಾರರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ವಕ್ಫ್ ನೋಟಿಸ್ ಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ವಕ್ಫ್ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು ವಕ್ಫ್ ನಿಷೇಧ ಮಾಡುವಂತೆ ಆಗ್ರಹಿಸಿದರು.
ಬಳಿಕ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, 109 ವರ್ಷದ ಎಂ.ಕೆ ಹಾಸ್ಟೆಲ್ ಮೇಲೆ ವಕ್ಫ್ ನೋಟಿಸ್ ಅಂಟಿಸಿ ಈ ಅಸ್ತಿ ನಮಗೆ ಸೇರಿದೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರಿಗೆ ಮಹರಾಜರ ಹಿನ್ನಲೆ ಇದೆ ಹೊರತು ಹೈದರಾಲಿ, ಟಿಪ್ಪುಸುಲ್ತಾನ ಇತಿಹಾಸವಿಲ್ಲ. ವಕ್ಫ್ ಮಂಡಳಿ ಅವರು ಖಾಸಿಗೆ ಅಸ್ತಿ ಎಲ್ಲಾ ನನ್ನದ್ದು ಎಂದು ಕಬಳಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಕ್ಫ್ ತಿದ್ದುಪಡಿಯನ್ನು ತಂದಿದ್ದು. ವಕ್ಫ್ ವಕ್ಫ್ ಅಂತ ರೈತರ ಆಸ್ತಿ ಕಬಳಿಸುತ್ತಿದ್ದಾರೆ ಎಂದು ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…