ವಕ್ಫ್‌ ಆಸ್ತಿ ವಿವಾದ: ಬಿಜೆಪಿ ನಾಯಕರ ಬೃಹತ್‌ ಪ್ರತಿಭಟನೆ

ಮೈಸೂರು: ವಕ್ಫ್‌ ಆಸ್ತಿ ವಿವಾದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿಂದು ಬಿಜೆಪಿ ನಾಯಕರು ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಇಂದು(ನ.22) ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಟಿ.ಎಸ್‌.ಶ್ರೀವತ್ಸ ಮಾತನಾಡಿ, ರೈತರ ಜಮೀನು ರೈತರಿಗೆ ಉಳಿಯಬೇಕು. ಸರ್ಕಾರ ಯಾರ ಆಸ್ತಿಯನ್ನು ಕಬಳಿಕೆ ಮಾಡಿದ್ದರೂ ಅದು ತಪ್ಪೇ ಆಗುತ್ತದೆ. ರೈತರು ಉಳುಮೆ ಮಾಡುವ ಭೂಮಿಯನ್ನು ಕಸಿಯುವಂತಹ ವಕ್ಫ್‌ ಮಂಡಳಿಗೆ ಸರ್ಕಾರ ಕಡಿವಾಣವನ್ನು ಹಾಕಬೇಕು. ಈ ದೇಶದಲ್ಲಿ ಸಂವಿಧಾನ ಎಲ್ಲರಿಗೂ ಒಂದೇ ಆಗಿದೆ. ಈ ನಿಟ್ಟಿನಲ್ಲಿ ಸರ್ಕಾರ ವಕ್ಫ್‌ ಆಸ್ತಿಗಳಲ್ಲಿ ತಿದ್ದುಪಡಿ ಮಾಡಿ ರೈತರ ಭೂಮಿಗಳನ್ನು ರೈತರಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಎಲ್‌.ನಾಗೇಂದ್ರ ಮಾತನಾಡಿ, ರಾಜ್ಯ ಸರ್ಕಾರ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು, ದೇವಾಲಯಗಳು ಹಾಗೂ ರೈತರ ಜಮೀನುಗಳನ್ನು ವಕ್ಫ್‌ ಆಸ್ತಿಯಾಗಿ ಬದಲಾವಣೆ ಮಾಡಿ ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ನಾವೆಲ್ಲರೂ ಯಾವುದೇ ಕಾರಣಕ್ಕೂ ಒಂದಿಂಚೂ ಜಾಗವನ್ನು ಕೂಡ ವಕ್ಫ್‌ ಮಂಡಳಿಗೆ ಬಿಟ್ಟು ಕೊಡುವುದಿಲ್ಲ. ಈ ಬಗ್ಗೆ ಸರ್ಕಾರ ವಕ್ಫ್‌ ಮಂಡಳಿಯ ವಿರುದ್ಧ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

7 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

7 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

13 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

13 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

13 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

13 hours ago