ಮೈಸೂರು ನಗರ

ಕೋರ್ಟ್‌ನಿಂದ ತಡೆಯಾಜ್ಞೆ ತಂದು ರಾಜಕಾರಣ ಮಾಡ್ತಿಲ್ಲ : ಪ್ರತಾಪ್‌ ಸಿಂಹ ವಿರುದ್ಧ ಮಾಜಿ ಶಾಸಕ ಎಲ್‌.ನಾಗೇಂದ್ರ ಕಿಡಿ

ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನಿನ್ನೆ(ಜ.6) ಇಂಗಿತ ವ್ಯಕ್ತಪಡಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮಾಜಿ ಶಾಸಕ ಎಲ್.ನಾಗೇಂದ್ರ ತೀರುಗೇಟು ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗೇಂದ್ರ, ಟಿಕೆಟ್‌ ಯಾರಿಗೆ ಕೊಡಬೇಕೆಂದು ನಿರ್ಧರಿಸುವುದು ಹೈಕಮಾಂಡ್.‌ ಪ್ರತಾಪ್‌ ಸಿಂಹಗೆ ಅದರ ಬಗ್ಗೆ ಅರಿವಿರಬೇಕು. ಯಾವ ಕಾರಣಕ್ಕೆ ಆ ರೀತಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದೇನೆ. ನನ್ನ ಬಗ್ಗೆ ಯಾವ ಆಪಾದನೆಗಳಿಲ್ಲ. ನಾನು ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ತಂದು ರಾಜಕಾರಣ ಮಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡುವಾಗಲೂ ಹೀಗೆಯೇ ಹೇಳಿದ್ದರು. ಪಾರ್ಲಿಮೆಂಟ್ ಟಿಕೆಟ್ ಯಾಕೆ ಅವರಿಗೆ ಸಿಗಲಿಲ್ಲ. ನನ್ನ ಕ್ಷೇತ್ರದ ಜೊತೆಗೆ ನಾಲ್ಕು ಕ್ಷೇತ್ರ ಗೆಲ್ಲಿಸಬೇಕಿದೆ. ನಮ್ಮ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ನಾನು ಕಡಿಮೆ ಅಂತರದಲ್ಲಿ ಸೋತಿದ್ದೇನೆ. ಪಕ್ಷದ ಇತಿಮಿತಿ ಮೀರಿ ಯಾರೂ ವರ್ತಿಸಬಾರದು. ಸಾರ್ವಜನಿಕರಿಗೆ ಯಾರೂ ಗೊಂದಲ ಮೂಡಿಸಬೇಡಿ. ಟಿಕೆಟ್ ಯಾರಿಗೆ ಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ತಿಳಿಸಿದರು.

ಕಳೆದ ಲೋಕಸಭೆ, ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಬರಲಿಲ್ಲ. ಕಳೆದ ಬಾರಿ ಯದುವೀರ್ ಅವರಿಗೆ ೫೬,೫೦೦ ಮತ ನೀಡಿದ್ದೇವೆ. ಅವರೊಬ್ಬ ಹಿಂದು ಹುಲಿ ಇದ್ದೀನಿ ಅಂತಾರೆ. ಅವರು ರಾಜ್ಯನಾಯಕರಾಗಿ ಬೆಳೆದಿದ್ದಾರೆ. ಅವರು ಬೇರೆ ಎಲ್ಲಾದರೂ ಸ್ಪರ್ಧೆ ಮಾಡಲಿ. ಅವರು ಬೇರೆ ಊರಿನಿಂದ ಬಂದವರು. ನಾನು ಇದೇ ಊರಿನವನು, ಬೇರೆ ಕಡೆ ಹೋಗಲು ಆಗಲ್ಲ ನನ್ನ ಹುಟ್ಟೂರಿನಲ್ಲೇ ನನ್ನ ಹೋರಾಟ ಎಂದರು.

೨೦೨೮ರ ಚುನಾವಣೆಗೂ ನನಗೇ ಟಿಕೆಟ್ ಸಿಗುವ ವಿಶ್ವಾಸ ಇದೆ. ಮಂಡಲದ ಅಧ್ಯಕ್ಷರು ಯಾರ ಪರ ಇದ್ದಾರೆ ಒಮ್ಮೆ ಕೇಳಿ. ನನಗೆ ಅವರಿಗಿಂತ ೧೦೦ ರಷ್ಟು ಕಾರ್ಯಕರ್ತರು ಜೊತೆಗಿದ್ದಾರೆ. ನಮ್ಮ ಸಂಬಂಧಿಕರು, ಸ್ನೇಹಿತರು ಎಲ್ಲರೂ ನನ್ನ ಜೊತೆ ಇದ್ದಾರೆ ಎಂದು ತಿರುಗೇಟು ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

12 mins ago

ಶಿಥಿಲಾವಸ್ಥೆಯಲ್ಲಿ ‘ದಲಿತ- ಗಾಂಧಿ’ ಶತಮಾನದ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಮಕ್ಕಳಲ್ಲಿ ಗಾಂಧೀಜಿ ಅವರ ಸರಳತೆ, ಸಹಿಷ್ಣುತೆ, ಸಮಾನತೆಯ ಚಿಂತನೆಗಳ ಅರಿವು…

16 mins ago

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

10 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

13 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

14 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

14 hours ago