Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಯಾವುದೇ ತೊಂದರೆ ಆಗಿಲ್ಲ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ. ಸೂಕ್ತ ವ್ಯಕ್ತಿಗಳಿಗೆ, ಸರಿಯಾದ ಕುಟುಂಬಗಳಿಗೆ ಗ್ಯಾರಂಟಿಗಳು ಸಿಗುತ್ತಿಲ್ಲ. ಎಷ್ಟು ಸೌಲಭ್ಯ ಕೊಡ್ತೀವಿ. ಅಷ್ಟು ದುರುಪಯೋಗವಾಗುತ್ತಿದೆ. ಅರ್ಹರಿಗೆ ಯೋಜನೆ ತಲುಪಿದರೆ ಯಶಸ್ವಿಯಾಗುತ್ತದೆ. ಕೆರೆಯ ನೀರನ್ನು ಕೆರೆಗೆ ಚೆಲ್ಲುವ ಕಾರ್ಯಕ್ರಮ. ನಮಗೆ ಸಂಪನ್ಮೂಲದ ಕೊರತೆ ಇರುವ ಸ್ಥಳದಿಂದ ಸರಿಪಡಿಸಬೇಕು ಎಂದು ಹೇಳಿದರು.

 

Tags:
error: Content is protected !!