Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ಬಿಜೆಪಿಯಲ್ಲಿ ದಲಿತರನ್ನು ರಾಷ್ಟ್ರಪತಿ ಮಾಡಿದ್ದೇವೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

We have made Dalits Presidents in the BJP

ಮೈಸೂರು: ದಲಿತರನ್ನು ರಾಜ್ಯಾಧ್ಯಕ್ಷ ಮಾಡಿ ಎಂಬ ಸಿಎಂ ಸಿದ್ದರಾಮಯ್ಯ ಟ್ವೀಟ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ದಲಿತರನ್ನು ರಾಷ್ಟ್ರಪತಿ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯರಿಂದ ನಾವು ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ದೇವರಾಜು ಅರಸು ಅವರಿಗೆ ಕಾಂಗ್ರೆಸ್ ಪಕ್ಷ ಹಾಗೂ ಗಾಂಧಿ ಕುಟುಂಬ ಏನೆಲ್ಲಾ ಅಪಮಾನ ಮಾಡಿದೆ ಎಂಬುದನ್ನು ಸಿದ್ದರಾಮಯ್ಯ ನೆನಪಿಸಿಕೊಳ್ಳಲಿ. ಅಹಿಂದ ಅಹಿಂದ ಎನ್ನುತ್ತಲೇ ಎಲ್ಲರಿಗೂ ಸಿದ್ದರಾಮಯ್ಯ ಅನ್ಯಾಯ ಮಾಡುತ್ತಿದ್ದಾರೆ. ಅವರ ಮುಖವಾಡ ಕಳಚಿ ಬಿದ್ದಿದೆ. ಕಾಂತರಾಜು ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Tags:
error: Content is protected !!