ಮೈಸೂರು: ನಾವು ಆರ್‌ಎಸ್‌ಎಸ್‌ನ್ನು ಟಾರ್ಗೆಟ್ ಮಾಡಿಲ್ಲ. ಎಲ್ಲಾ ಸಂಘಟನೆಗಳಿಗೂ ಕೂಡ ಇದು ಅನ್ವಯ ಆಗುವಂತೆ ಆದೇಶ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ಗಲಾಟೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ನಾವು ಆರ್‌ಎಸ್‌ಎಸ್ ಟಾರ್ಗೆಟ್ ಮಾಡಿಲ್ಲ.
ಎಲ್ಲ ಸಂಘಟನೆಗಳಿಗೂ ಕೂಡ ಅನ್ವಯ ಆಗುವಂತೆ ಆದೇಶ ಮಾಡಿದ್ದೇವೆ. ಬಿಜೆಪಿ ಇದರಲ್ಲಿ ವಿನಾಕರಣ ರಾಜಕಾರಣ ಮಾಡುತ್ತಿದೆ. ಮೊದಲಿನಿಂದಲೂ ಬಿಜೆಪಿ ಇದನ್ನೇ ಮಾಡಿಕೊಂಡು ಬರುತ್ತಿದೆ. ಬಿಜೆಪಿಯಿಂದ ಕರ್ನಾಟಕದಲ್ಲಿ ಶಾಂತಿ ಭಂಗ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಗುತ್ತಿಗೆದಾರರು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರನ್ನು ಕರೆಸಿ ನಾನು ಮಾತನಾಡುತ್ತೇನೆ ಎಂದು ಹೇಳಿದರು.





