ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ ತೀರ್ಪು ಇಂದು(ಸೆ.24) ಹೈಕೋರ್ಟ್‌ನಲ್ಲಿ ಹೊರಬೀಳಲಿದ್ದು ತೀರ್ಪು ನಮ್ಮ ಪರ ಬರದಿದ್ದರೆ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಮುಡಾ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇಂದು ಮುಖ್ಯಮಂತ್ರಿ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದಂತೆ ತೀರ್ಪು ಬರಲಿದೆ. ಈ ವಿಚಾರವಾಗಿ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರ ತೀರ್ಪು ಬಂದು, ನಮ್ಮ ಪರ ತೀರ್ಪು ಬರದೇ ಹೋದರೆ ನಾವೆಲ್ಲರೂ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ.
ಮುಡಾ ಪ್ರಕರಣದಲ್ಲಿ ಅಂತಿಮ ಅಂತ್ಯ ಕಾಣಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಆರೋಪಿಗಳು ತಪ್ಪು ಮಾಡಿಲ್ಲ ಎಂದು ಹೇಳುವುದು ನೈಜತೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನ್ಯಾಯಾಲಯಕ್ಕೆ ಈಗಾಗಲೇ ಅನೇಕ ಸಾಕ್ಷಿ ನೀಡಿದ್ದೇವೆ. ಜೊತೆಗೆ ಸಿಎಂ ಅವರು ಸಹ ನಮ್ಮಂತೆಯೇ ಸಾಕ್ಷಿಗಳನ್ನು ನೀಡಿರುತ್ತಾರೆ. ಸಿದ್ದರಾಮಯ್ಯ ಅವರ ಮಡದಿ ಹೆಸರಿನಲ್ಲಿರುವ 50:50 ಅನುಪಾತದ ಬದಲಿ ನಿವೇಶನ ಅವರ ಅಧಿಕಾರ ಅವಧಿಯಲ್ಲೇ ಪಡೆದಿದ್ದಾರೆ. ಮುಡಾದ 50:50 ಅನುಪಾತದ ಬದಲಿ ನಿವೇಶನ ತಪ್ಪು ಎಂದು ಆದೇಶದಲ್ಲೇ ಸ್ಪಷ್ಟವಾಗಿದೆ. ಆಗಿದ್ದ ಮೇಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ನಿವೇಶನ ಪಡೆದಿರುವುದು ತಪ್ಪು ಎನ್ನುವುದು ಕೂಡ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…