ಮೈಸೂರು ನಗರ

ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರನ್ನು ಇಟ್ಟೇ ಇಡುತ್ತೇವೆ: ಶಾಸಕ ಹರೀಶ್‌ಗೌಡ

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಇಟ್ಟೇ ಇಡುತ್ತೇವೆ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ.

ನಗರದಲ್ಲಿ ಇಂದು (ಫೆ.19) ಮಾತನಾಡಿದ ಅವರು, ಆ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡದೇ ಬೇರೆ ಯಾರ ಹೆಸರಿಡಬೇಕು. ಮಹಾರಾಜರ ನಂತರ ಮೈಸೂರು ಅಭಿವೃದ್ದಿಗೆ ಅಪಾರ ಕೊಡುಗೆ ನೀಡಿರುವುದು ಸಿದ್ದರಾಮಯ್ಯ ಅವರು. ಆ ರಸ್ತೆಯಲ್ಲಿರುವ ಜಯದೇವ, ಜಿಲ್ಲಾಸ್ಪತ್ರೆ, ಇಎಸ್‌ಐ ಆಸ್ಪತ್ರೆ ರಿನೋವೇಷನ್‌, ಸ್ಯಾನಿಟೋರಿಯಂ ಆಸ್ಪತ್ರೆ ಸೇರಿದಂತೆ ಹಲವಾರು ಆಸ್ಪತ್ರೆಗಳ ಅಭಿವೃದ್ದಿ ಮಾಡಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಅವರೇ ರಸ್ತೆಯ ವಿಚಾರದಲ್ಲಿ ಸುಮ್ಮನೆ ವಿವಾದ ಸೃಷ್ಠಿಸೋದು ಬೇಡ ಅಂತ ಹೇಳಿದ್ದಾರೆ. ಆದರೂ, ಸಂಸದ ಯದುವೀರ್‌ ಅವರಿಗೂ ಕೂಡ ಮನವಿ ಮಾಡಿದ್ದೇವೆ. ಎಲ್ಲರಿಗೂ ಮನವರಿಕೆ ಮಾಡಿ ಆ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಸಿಎಂ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಬೇಕು. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಚುನಾವಣೆಯಲ್ಲಿ ನಮಗೆ ಪೂರಕವಾದ ಫಲಿತಾಂಶ ಬರಬೇಕು ಅಂದ್ರೆ ಡಿಕೆ ಶಿವಕುಮಾರ್‌ ಅಧ್ಯಕ್ಷರಾಗಿರಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಸಿಲಿಂಡರ್‌ ಅಭಾವ: ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಎಂ ಲಕ್ಷ್ಮಣ್ ಕಿಡಿ

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…

6 mins ago

ಏಪ್ರಿಲ್.‌5ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…

31 mins ago

ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತಗೊಳಿಸಲು ಶ್ರಮಿಸಿ : ಎಡಿಸಿ ತಾಕೀತು

ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…

46 mins ago

ಆಟೋ ಗ್ಯಾಸ್‌ ಕೊರತೆ ; ವದಂತಿಗಳಿಗೆ ಕಿವಿಗೊಡದಂತೆ ಸಲಹೆ

ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…

55 mins ago

ಚಿಕ್ಕಮಗಳೂರು | ಚಾರಣಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿ ನಾಪತ್ತೆ ; ತೀವ್ರ ಹುಡುಕಾಟ

ಚಿಕ್ಕಮಗಳೂರು : ಬಾಬಾಬುಡನ್‌ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…

1 hour ago

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

2 hours ago