ದೇಶವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸಲು ನಾವು ಬಿಡಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಭಾರತ ದೇಶವನ್ನು ಒಂದೇ ಒಂದು ಧರ್ಮದ ರಾಷ್ಟ್ರವಾಗಿ ಮಾಡಲು ನಾವು ಯಾವುದೇ ಕಾರಣಕ್ಕೂ ಬಿಡಬಾರದೆಂಬ ಹೇಳಿಕೆಯ ಮೂಲಕ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹಿಂದೂ ರಾಷ್ಟ್ರ ಪರಿಕಲ್ಪನೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಭಾರತವು ವಿವಿಧ ಜಾತಿ, ಧರ್ಮ, ಸಂಸ್ಕೃತಿಯಿಂದ ಕೂಡಿರುವ ದೇಶವಾಗಿದೆ. ಆದರೆ ಕೆಲ ರಾಜಕೀಯ ಗುಂಪುಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಿಂದೂ ಧರ್ಮದ ರಾಷ್ಟ್ರವನ್ನಾಗಿಸಲು ಹೊರಟಿದ್ದಾರೆ. ಅದನ್ನು ನಾವೆಲ್ಲರೂ ವಿರೋಧಿಸಬೇಕು. ಇಲ್ಲವಾದರೆ ಒಂದು ಧರ್ಮದ ರಾಷ್ಟ್ರವಾಗಿ ಉಳಿಯುತ್ತದೆ ಎಂದರು.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನದಲ್ಲಿ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ. ಏಕೆಂದರೆ ಸಂವಿಧಾನದ ಪೀಠಿಕೆಯಲ್ಲಿ ಎಲ್ಲಾ ಜನಾಂಗದ ಹಾಗೂ ಧರ್ಮದ ಹಕ್ಕು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಎಂಬಂತೆ ಉಲ್ಲೇಖಿಸಿದೆ. ಅಲ್ಲದೇ ನಮ್ಮ ದೇಶದ ಸಂವಿಧಾನ ಕಠಿಣವಾಗಿದೆ. ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಹೊರಟಿರುವುದು ಅಪಾಯಕಾರಿಯಾಗಿದೆ. ಹೀಗಾಗಿ ಸಂವಿಧಾನವನ್ನು ರಕ್ಷಣೆ ಮಾಡಬೇಕೆಂದು ಹೇಳಿದರು.

ಇನ್ನು, ಕೆಲವು ಜನರು ನಮ್ಮ ದೇಶವನ್ನು ಒಂದು ಧರ್ಮದ ರಾಷ್ಟ್ರವಾಗಬೇಕೆಂದು ಬಯಸುತ್ತಿದ್ದಾರೆ. ಆದರೆ ಬಹುಸಂಖ್ಯಾತ ಜನರು ಸ್ನೆಹ-ಸೌಹಾರ್ದತೆಯಿಂದ ಹಾಗೂ ಸೋದರರಂತೆ ಜೀವಿಸಬೇಕೆಂದು ಆಶಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಭಾರತಕ್ಕೆ ಹಿಂದೂ ರಾಷ್ಟ್ರದ ಪರಿಕಲ್ಪನೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಭಾರತ ಕೇವಲ ಹಿಂದುತ್ವದ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ದೇಶದಲ್ಲಿ ಎಲ್ಲಾ ಸಮುದಾಯಗಳ ಜನರು ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಅಂತಹವರನ್ನು ಮೇಲೆತ್ತುವ ಕೆಲಸವನ್ನು ಸರ್ಕಾರ ಮಾಡಬೇಕು. ದೇಶದಲ್ಲಿ ಎಲ್ಲಾ ಜನಾಂಗ ಮತ್ತು ಸಮುದಾಯದವರು ಅಭಿವೃದ್ಧಿಯಾದರೆ ಮಾತ್ರ ಭಾರತವೂ ಸಮಗ್ರವಾಗಿ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

 

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

44 mins ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

55 mins ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

1 hour ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

1 hour ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

1 hour ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

1 hour ago