ಮೈಸೂರು ನಗರ

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಗೆ ನಾನು ಹೋಗಿಲ್ಲ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಹತ್ತು ದಿನ ಬಾಗಲಕೋಟೆಯಲ್ಲಿ ಪ್ರಚಾರ ಮಾಡಿದ್ದೇನೆ. ಅಲ್ಲಿ ಸ್ಥಳೀಯವಾಗಿ ಏನಾಗಿದೆ ಎಂಬುದು ಗೊತ್ತಿಲ್ಲ. ಆದರೂ ಎರಡು ಕಡೆ ನಾವು ಗೆಲ್ಲುತ್ತೇವೆ. ಎರಡು ಕಡೆಯಲ್ಲೂ ಅವರವರ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದೇವೆ. ನಾವು ಗೆಲ್ಲುತ್ತೇವೆ‌‌. ಮುಸ್ಲೀಂ ಮುಖಂಡರ ವಿಚಾರ ಆಗಿರುವ ಬೆಳವಣಿಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇನ್ನು ಯತೀಂದ್ರರನ್ನು ವಸೂಲಿಗೆ ರಾಜಕೀಯಕ್ಕೆ ತಂದಿದ್ದಾರೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರ ಮನೆಯವರು ಎಲ್ಲರೂ ವಸೂಲಿಗೆ ನಿಂತಿದ್ರು ಅಂತಾ ನಾನೂ ಹೇಳ್ತೀನಿ. ಕುಮಾರಸ್ವಾಮಿ ಬಳಿ ಯಾವುದು ದಾಖಲೆ ಇಲ್ಲ. ಆರೋಪ ಮಾಡೋಕೆ ಏನೂ ಇಲ್ಲ. ಹೀಗಾಗಿ ಏನೇನೋ ಮಾತಾಡ್ತಾರೆ. ನಮ್ಮ ತಂದೆಯವ್ರು ರಾಜಕಾರಣದಲ್ಲಿ ಸೋಲು ಗೆಲುವು ಎರಡನ್ನೂ ಕಂಡವ್ರು. ಹೀಗಾಗಿ ಕಣ್ಣೀರು ಹಾಕೋ ಅವಶ್ಯಕತೆ ಅವ್ರಿಗೆ ಏನಿದೆ. ನಮ್ಮ ತಂದೆ ಮುಖ್ಯಮಂತ್ರಿ ಆಗಿರೋವರೆಗೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ.
ಸಚಿವ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿ ಇರ್ತಾರೆ. ಹೈಕಮಾಂಡ್ ಯಾರು ಸಚಿವರಾಗಬೇಕು ಅನ್ನೋದನ್ನ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

1 hour ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

2 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

3 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

3 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

3 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

7 hours ago