ಮೈಸೂರು ನಗರ

ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ : ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು.

ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಆರಕ್ಷಕ ಅಶ್ವದಳದ ವಸ್ತು ಸಂಗ್ರಹಾಲಯವನ್ನು ವೀಕ್ಷಿಸಿದರು. ನಜರ್‌ಬಾದ್ ಪೊಲೀಸ್ ಠಾಣೆಗೆ ದೀಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಆರಂಭದಿಂದ ಇಲ್ಲಿಯವರೆಗೆ ಬೆಳೆದುಬಂದ ರೀತಿ ಹಾಗೂ ಇಲಾಖೆಗೆ ಸಂಬಂಧಿಸಿದ ನೆನಪಿನಲ್ಲಿ ಉಳಿಯುವಂತಹ ವಸ್ತುಗಳನ್ನು ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರಸಿದ್ಧವಾದ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಮಾಡಲಾಗುವುದು ಎಂದು ವಿವರಿಸಿದರು.

ನಜರ್‌ಬಾದ್ ಪೊಲೀಸ್ ಠಾಣೆ ಮೈಸೂರಿನಲ್ಲಿ ಅತ್ಯಂತ ಹಳೆಯ ಪೊಲೀಸ್ ಠಾಣೆ. ಬಹಳ ದಿನದಿಂದ ಭೇಟಿ ನೀಡಬೇಕು ಎಂದುಕೊಂಡಿದೆ. ಪೊಲೀಸ್ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಲು ದಿಢೀರ್ ಭೇಟಿ ನೀಡಿದ್ದೇನೆ.

ಇದನ್ನು ಓದಿ: ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ: ಸಚಿವ ಶಿವಾನಂದ್‌ ಪಾಟೀಲ್‌

ರೆಕಾರ್ಡ್‌, ಸಶಸ್ತ್ರಗಳನ್ನು ಇಟ್ಟುಕೊಳ್ಳುವುದು ಸೇರಿದಂತೆ ಪರಿಶೀಲನೆ ನಡೆಸಿದ್ದೇನೆ. ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದೇನೆ. ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದ ನಾಲ್ಕೈದು ಜನರಿಗೆ ಖುದ್ದು ಕರೆ ಮಾಡಿ ವಿಚಾರಿಸಿದೆ.

ಆನ್‌ಲೈನ್‌ ವಂಚನೆಯಾಗಿರುವ ಬಗ್ಗೆ ತಿಳಿಸಿದರು. ವಂಚನೆಯಾದ ಬಳಿಕ 1930 ನಂಬರ್‌ಗೆ ಕರೆ ಮಾಡಿದ್ದಾರೆ. ವಂಚಕರ ಬ್ಯಾಂಕ್ ಖಾತೆ ನಿಷ್ಕ್ರೀಯಗೊಳಿಸಲಾಗಿರುತ್ತದೆ. ಆ‌ ಪ್ರಕರಣದ ತನಿಖೆಯನ್ನು ಫಾಲೋಅಪ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಜರ್‌ಬಾದ್ ಪೊಲೀಸ್ ಠಾಣೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದರು.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದೇನೆ. ಹೆಚ್ಚಿನಂಶ ಸೈಬರ್ ವಂಚನೆಗೊಳಗಾಗುತ್ತಿದ್ದಾರೆ. ಮೈಸೂರಿನಲ್ಲಿ‌ ಡಿಜಿಟಲ್ ಅರೆಸ್ಟ್, ಹೂಡಿಕೆ ಸೇರಿದಂತೆ ವಿವಿಧ ರೀತಿಯಲ್ಲಿ ಸುಮಾರು 30 ಕೋಟಿ ರೂ.ಯಷ್ಟು ಸೈಬರ್ ವಂಚನೆಯಾಗಿದೆ. ಕಳೆದ ವರ್ಷ 40 ಕೋಟಿ ರೂ.ಯಷ್ಟು ವಂಚನೆಯಾಗಿತ್ತು. ಈ ವರ್ಷ ಕಡಿಮೆಯಾಗಿದೆ. 30 ಕೋಟಿ ರೂಪಾಯಿ ವಂಚನೆಯಲ್ಲಿ 5 ಕೋಟಿ ರೂ. ಪತ್ತೆಹಚ್ಚಲಾಗಿದೆ. ಇದನ್ನು ಯಾವ ರೀತಿ ನಿಯಂತ್ರಣಕ್ಕೆ ತರಬೇಕು ಎಂಬ ನಿಟ್ಟಿನಲ್ಲಿ ಚರ್ಚಿಸಲಾಗಿದೆ. ಬೆಂಗಳೂರಿನಲ್ಲಿ ಕುಳಿತು ಅಮೆರಿಕಾದವರಿಗೆ ಡಿಜಿಟಲ್ ಅರೆಸ್ಟ್ ವಂಚನೆ ಮಾಡುತ್ತಿದ್ದವರ ಬಗ್ಗೆ ಪತ್ತೆಹಚ್ಚಿ ಬಂಧಿಸಿದ್ದೇವೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೈಬರ್ ಲ್ಯಾಬ್ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಸೈಬರ್ ಲ್ಯಾಬ್ ಮಾಡಲಾಗಿದೆ. ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಹಿರಿಯ ಪೊಲೀಸ್ ಅಧಿಕಾರಿವರೆಗೂ ಸೈಬರ್ ಅಪರಾಧದ ಕುರಿತು ತಾಂತ್ರಿಕ ಜ್ಞಾನ ಹಾಗೂ ತರಬೇತಿ ಇರಬೇಕು. ಈ ಎರಡು ವರ್ಷದೊಳಗೆ ಇಲಾಖೆಯ ಎಲ್ಲ ಸಿಬ್ಬಂದಿಗಳಿಗೂ ಹಂತಹಂತವಾಗಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ: ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ

ರಾಷ್ಟ್ರೀಯ ಪೊಲೀಸ್ ಆಯೋಗದಿಂದ ಒಬ್ಬ ಪೊಲೀಸ್ ಎಷ್ಟು ತಾಸು ಕೆಲಸ ಮಾಡಬೇಕು ಎಂಬ ಬಗ್ಗೆ ಸೂಚನೆ ಇದೆ. ಕೆಲವು ಸಂದರ್ಭಗಳಲ್ಲಿ ಅದು ಸಾಧ್ಯವಾಗುವುದಿಲ್ಲ. ಪಿಎಸ್‌ಐ ಅಕ್ರಮದಿಂದ ನೇಮಕಾತಿ ಸ್ಥಗಿತವಾಗಿತ್ತು. ಇದೆಲ್ಲ ಸಮಸ್ಯೆಯನ್ನು ನಿವಾರಿಸಿ, ನೇಮಕಾತಿ ಮಾಡಿ 900ಕ್ಕೂ ಹೆಚ್ಚು ಪಿಎಸ್‌ಐಗಳನ್ನು ತರಬೇತಿಗೆ ಕಳುಹಿಸಲಾಗಿದೆ. ಎರಡು ತಿಂಗಳಲ್ಲಿ ತರಬೇತಿ ಪಡೆದು, ಕರ್ತವ್ಯಕ್ಕೆ ಬರುತ್ತಾರೆ. ಅಲ್ಲಿವರೆಗೂ ಎಲ್ಲವನ್ನು ನಿಭಾಯಿಸಿಕೊಂಡು ಹೋಗಬೇಕು ಎಂದು ಹೇಳಿದರು.

ಸೈಬರ್ ಅಪರಾಧದ ಕುರಿತು ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಲಾಗುತ್ತಿದೆ. ವಿದ್ಯಾವಂತರು ಹೆಚ್ಚಿನ ರೀತಿಯಲ್ಲಿ ವಂಚನೆಗೆ ಒಳಗಾಗುತಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಟೆಕ್ಕಿಯೊಬ್ಬರು ನಿರಂತರವಾಗಿ 32 ಕೋಟಿ ರೂ. ವಂಚನೆಗೊಳಗಾಗಿದ್ದಾರೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಈ ರೀತಿಯ ವಂಚನೆಗೆ ಸಿಲುಕುತ್ತಿದ್ದಾರೆ ಎಂದರು.

ಪೊಲೀಸ್ ಇಲಾಖೆಯ ಅಧಿಕಾರಿಗಳ ವರ್ಗಾವಣೆಗೆ ಕೆಲವು ನಿಯಮಗಳನ್ನು ರೂಪಿಸಲಾಗಿದೆ. ಒಂದು ವರ್ಷಕ್ಕೆ ವರ್ಗಾವಣೆ ಮಾಡುವ ನಿಯಮವಿತ್ತು. ಇದರಿಂದ ನಮಗು ಒತ್ತಡ ಮತ್ತು ಇಲಾಖೆಯಲ್ಲಿ ಸರಿಯಾಗಿ ಕೆಲಸಗಳಾಗುತ್ತಿರಲಿಲ್ಲ. ಈಗ ವರ್ಗಾವಣೆ ಮಾಡಲು ಎರಡು ವರ್ಷ ಆಗಿರಲೇಬೇಕು. ಇದರಿಂದ ಸ್ವಲ್ಪಮಟ್ಟಿಗೆ ಸುಧಾರಣೆಯಾಗಿದೆ‌. ಪೊಲೀಸ್ ಇಲಾಖೆಯಲ್ಲಿ ಹಂತಹಂತವಾಗಿ ಹಲವು ಬದಲಾವಣೆಗಳನ್ನು ತರಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಐಜಿಪಿ ಡಾ.‌ ಎಂ.ಬಿ.ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಬಿಂದುಮಣಿ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್ ಇದ್ದರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

7 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

11 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago