ಮೈಸೂರು: ದಸರಾ ಗಜಪಡೆ ಆರೋಗ್ಯದ ಬಗ್ಗೆ ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದ್ದು, ಎಲ್ಲಾ ಆನೆಗಳು ಕೂಡ ಆರೋಗ್ಯದಿಂದ ಇವೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಗಜಪಡೆ ತಾಲೀಮು ಆರಂಭಿಸಿವೆ. ಎಲ್ಲ ಆನೆಗಳು ಕೂಡ ಆರೋಗ್ಯದಿಂದ ಇವೆ. ಈಗಾಗಲೇ ವೈದ್ಯರು ಎಲ್ಲ ರೀತಿಯ ತಪಾಸಣೆ ಮಾಡಿದ್ದಾರೆ.
ಮೊದಲ ಹಂತದಲ್ಲಿ ಆರ್.ಎಂ.ಸಿವರೆಗೆ ಆನೆಗಳು ತಾಲೀಮು ಮಾಡಿವೆ. ಮುಂದಿನ ದಿನಗಳಲ್ಲಿ ಒಂದೊಂದೇ ರೀತಿಯ ತಾಲೀಮು ಮಾಡಿಸಲಾಗುವುದು. ಇಂದು ವಿಶ್ವ ಆನೆಗಳ ದಿನಾಚರಣೆ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಆನೆಗಳನ್ನು ನೋಡಲು ಅವಕಾಶ ಮಾಡಿಕೊಡುತ್ತೇವೆ. ಶಾಲಾ ಮಕ್ಕಳಿಗೆ ಆನೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.





