ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿರುವ ಕ್ರಮವನ್ನು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ನಿಂದ ರಾಜ್ಯದಲ್ಲಿ ಯಾವ ಅನಾಹುತ ಆಗಿದೆ ಎಂದು ಪ್ರಶ್ನೆ ಮಾಡಿದರು.
ಪ್ರಿಯಾಂಕ್ ಖರ್ಗೆ ಅವರು ಕೆಲಸಕ್ಕೆ ಬಾರದ ವಿಚಾರವನ್ನು ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಅವರಿಗೆ ಬಂದಿದೆ ಎನ್ನಲಾಗಿರುವ ಬೆದರಿಕೆ ಕರೆಗಳು ಸುಳ್ಳು. ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಯಾರು ಬೆದರಿಕೆ ಹಾಕುತ್ತಾರೆ? ತಾನು ಸಿಎಂ ವಿರುದ್ಧ ಟೀಕೆ ಮಾಡಿದರೂ ಇದುವರೆಗೂ ಯಾರೂ ಬೆದರಿಕೆ ಹಾಕಿಲ್ಲ ಎಂದು ಹೇಳಿದರು.
ಇದನ್ನು ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ: ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್
ಇನ್ನು ಮುಂದುವರಿದು ಮಾತನಾಡಿದ ಅವರು, ವಾಸ್ತವವಾಗಿ ಶಾಲೆಗಳಲ್ಲಿ ಮಕ್ಕಳಿಗೆ ಸರಿಯಾಗಿ ಊಟ ಹಾಗೂ ಪಾಠ ಸಿಗುತ್ತಿಲ್ಲ. ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ಬಳಸಿಕೊಂಡಿರುವುದೇ ಇದಕ್ಕೆಲ್ಲಾ ನೇರ ಕಾರಣ. ಎಸ್‌ಎಸ್‌ಎಲ್‌ಸಿಯಲ್ಲಿ 33 ಅಂಕ ಪಡೆದರೂ ಸಾಕೆಂಬ ಹೊಸ ನಿಯಮದಿಂದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ತೀವ್ರವಾಗಿ ಕುಂಠಿತವಾಗುತ್ತದೆ. ಇದರಿಂದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಆತನ ಸ್ನೇಹಿತರು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…