ಮೈಸೂರು: ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 4ಮಂದಿ ವಿರುದ್ಧ ಇಲ್ಲಿನ ಲೋಕಾಯುಕ್ತ ಠಾಣೆಯಲ್ಲಿ ಸಿಆರ್‌ಪಿಸಿ ಸೆಕ್ಷನ್ 154 ಅಟಿ ಎಫ್‌ಐಆರ್ ದಾಖಲಾಗಿದೆ.
ಇದರಲ್ಲಿ A1 ಆರೋಪಿ ಸಿಎಂ ಸಿದ್ದರಾಮಯ್ಯ, A2 ಆರೋಪಿ ಪತ್ನಿ ಪಾರ್ವತಿ ಸಿದ್ದರಾಮಯ್ಯ, A3 ಆರೋಪಿ ಭಾಮೈದಾ ಮಲ್ಲಿಕಾರ್ಜುನಸ್ವಾಮಿ ಮತ್ತು A4 ಆರೋಪಿ ಭೂ ಮಾಲೀಕ ಎನ್ನಲಾದ ಜೆ.ದೇವರಾಜು ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಯಾವ-ಯಾವ ಸೆಕ್ಷನ್ ದಾಖಲು?
ಭಾರತೀಯ ದಂಡಸಂಹಿತೆ ಕಾಯ್ದೆ ಸೆಕ್ಷನ್ 120ಬಿ, 166,403,406,420,426,465,486,340,351 ಹಾಗೂ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1998ರ ಸೆಕ್ಷನ್ 9,13 ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ 1988ರ ಸೆಕ್ಷನ್ 3, 53,54 ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆ 2011ರ ಸೆಕ್ಷನ್ 3,4ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೈಸೂರು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂಬರ್ 462, 464ಕ್ಕೆ ಸಂಬಂಧಿಸಿದಂತೆ 1986ರಿಂದ 2023ರ ನವೆಂಬರ್ 9ರವರೆಗೆ ನಡೆದಿರುವ ಎಲ್ಲ ವಹಿವಾಟಿನ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆ.
FIRಪ್ರತಿ
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…