ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು.
ಇದನ್ನು ಓದಿ: ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್ ಕುಸಿದ ಗಾಳಿಯ ಗುಣಮಟ್ಟ
ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ:
ಫೆಬ್ರವರಿ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ ?ಎಂದರು. ಗೃಹಲಕ್ಷ್ಮಿ ಹಣವನ್ನು ಲಪಟಾಯಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ ಎಂದರು. ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ ಹಣ ಇನ್ನು ಬಿಡುಗಡೆಯಾಗಿಲ್ಲ ಎಂದರು.
ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣಾ ಅವರು ಆಗ ಮುಖ್ಯಮಂತ್ರಿಗಳಿದ್ದರು, ಸರ್ಕಾರ ಮಾಡಿತ್ತು ಎಂದರು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…