ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕೆ.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಮ್ಮದ್ ಶಫಿ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಶಬ್ರಿನ್ ತಾಜ್, ಪ್ರಿಯಕರ ಅನ್ವರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 12 ವರ್ಷಗಳ ಹಿಂದೆ ಶಬ್ರೀನ್ ಹಾಗೂ ಮಹಮ್ಮದ್ ಶಫಿ ಮದುವೆಯಾಗಿದ್ದರು. ಈ ಮಧ್ಯೆ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.
ಇದನ್ನೂ ಓದಿ:- ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್: ಕೂದಲೆಳೆ ಅಂತರದಲ್ಲಿ ಪಾರು
ಈ ಮಧ್ಯೆ ಪತ್ನಿ ಶಬ್ರಿನ್‌ಗೆ ಅನ್ವರ್ ಎಂಬಾತನ ಜೊತೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಈ ಮಧ್ಯೆ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತಿ ಮಹಮ್ಮದ್ ಶಫಿಯನ್ನು ಪತ್ನಿ ಶಬ್ರಿನ್ ಹಾಗೂ ಪ್ರಿಯಕರ ಅನ್ವರ್ ಇಬ್ಬರು ಸೇರಿ ಮಲಗಿದ್ದ ವೇಳೆ ಕುತ್ತಿಗೆಗೆ ಮೊಬೈಲ್ ಚಾರ್ಜ್ ವೈರ್ ಬಿಗಿದು ಕೊಲೆ ಮಾಡಿದ್ದಾರೆ.
ಇದನ್ನೂ ಓದಿ:- ಮೈಸೂರು| ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಬೃಹತ್ ಪ್ರತಿಭಟನೆ
ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಕೆ.ಆರ್.ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.





