ಮೈಸೂರು: ಗೃಹಲಕ್ಷ್ಮೀ ಹಣದಿಂದ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ದಸರಾವನ್ನು ಸಂತಸದಿಂದ ಉದ್ಘಾಟನೆ ಮಾಡಿದ್ದೇನೆ. ಇಲ್ಲಿ ಕೂಡ ಅನೇಕ ಮಹಿಳೆಯರು ಗೃಹಲಕ್ಷ್ಮಿ ಹಣದಲ್ಲಿ ಸ್ಟಾಲ್ ಇಟ್ಟಿದ್ದಾರೆ. ಸರ್ಕಾರದ ಉದ್ದೇಶ ಕೂಡ ಇದೇ ಆಗಿತ್ತು. ಹಾಗಾಗಿ ಬಹಳ ಖುಷಿಯಿಂದ ಮಹಿಳಾ ದಸರಾ ಉದ್ಘಾಟನೆ ಮಾಡಿದ್ದೇನೆ ಎಂದು ಹೇಳಿದರು.
ಇದನ್ನು ಓದಿ : ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ
ಇನ್ನು ರಾಜ್ಯದಲ್ಲಿ ಜಾತಿಗಣತಿ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಜಾತಿಗಳನ್ನು ಸೇರಿಸುವ ಬಗ್ಗೆ ರಾಜಣ್ಣ ಆಕ್ರೋಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಣ್ಣ ಏನು ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ. ಈ ಸಂಬಂಧ ಈಗಾಗಲೇ ನಮ್ಮ ಸಿಎಂ ಹಾಘೂ ಡಿಸಿಎಂ ಸಭೆ ಮಾಡಿ ನಿರ್ಧಾರ ಮಾಡಿದ್ದಾರೆ. ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ನಿರ್ಧಾರವಾಗಿದೆ. ಯಾವುದೇ ಗೊಂದಲ ಇಲ್ಲ, ಸಿಎಂ ಡಿಸಿಎಂ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ ಎಂದು ಹೇಳಿದರು.





