ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಎಸ್.ಅರುಣ್ ಕುಮಾರ್ ಹೇಳಿದರು.
ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ತಾಲ್ಲೂಕು ಪಂಚಾಯತ್ ವತಿಯಿಂದ ಇಲವಾಲ ಗ್ರಾಮದ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ” ಹಾಗೂ “ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದೆ. ಬಡವರು ಹಾಗೂ ಮಹಿಳೆಯರ ಏಳಿಗೆಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ. ಕುಟುಂಬ ನಿರ್ವಹಣೆಯ ಜೊತೆಗೆ ಅನೇಕ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ.ಬಿ.ಸವಿತಾ ಮಾತನಾಡಿ, ಮಹಿಳೆಯರು ತಮ್ಮ ಸಾಮಾರ್ಥ್ಯದಿಂದ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಆದ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಹಿಸುತ್ತಿದ್ದಾರೆ. ಯಾವುದೇ ಹಿಂಜರಿಕೆಗೆ ಒಳಗಾಗಬಾರದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಅಧ್ಯಕ್ಷರಾದ ಗುರುಸ್ವಾಮಿ ಮಾತನಾಡಿ, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅನೇಕರು ಸ್ವಾವಲಂಭಿ ಜೀವನ ನಡೆಸುತ್ತಿದ್ದಾರೆ. ಮಹಿಳೆಯರ ಜೀವನ ಸುಧಾರಣೆ ಕಂಡಿದೆ. ಪ್ರತಿಯೊಂದು ಕುಟುಂಬವು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಮಾತನಾಡಿ, ಪ್ರಕೃತಿ ಸ್ವರೂಪಿಯಾದ ಮಹಿಳೆಯರು ಉತ್ತಮ ಸಮಾಜ ನಿರ್ಮಾಣ ಮಾಡುದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ನಮ್ಮ ಗ್ರಾಮೀಣ ಭಾಗದ ಮಹಿಳೆಯರು ಕೀಳಿರಿಮೆ ಬೆಳೆಸಿಕೊಳ್ಳದೆ ಆತ್ಮವಿಶ್ವಾಸದಿಂದ ಬದುಕಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಬಿ.ಕರೀಗೌಡ, ಬಸವಣ್ಣ, ತಾಲ್ಲೂಕು ಸಮಿತಿಯ ಸದಸ್ಯರಾದ ಚನ್ನಪ್ಪ, ಕರೀಗೌಡ, ರಾಣಿ, ನವೀನ್, ಗ್ರಾಮಾಂತರ ಸಿಡಿಪಿಒ ತಿಮ್ಮಯ್ಯ, ಆಹಾರ ಶಿರಸ್ತೆದಾರ್ ಮಹೇಶ್ ಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಣಿ, ಆಹಾರ ನಿರೀಕ್ಷಕರಾದ ನಂದಿನಿ, ಇಲವಾಲ ಗ್ರಾ.ಪಂ. ಪಿಡಿಒ ಹೇಮಂತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು
ಗ್ಯಾರಂಟಿ ಯೋಜನೆ ಫಲಾನುಭವಿ ರತ್ನಮ್ಮ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಹಸು ಖರೀದಿಸಿದ್ದೇನೆ. ಇದರಿಂದ ನಮ್ಮ ಕುಟುಂಬ ನಿರ್ವಹಣೆ ಸುಧಾರಿಸಿದೆ. ಭೂರಹಿತರಾದ ನಮಗೆ ಅನ್ನಭಾಗ್ಯದಿಂದ ಹೊಟ್ಟೆತುಂಬ ಊಟ ಮಾಡುವಂತಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣದ ಹಣ ಉಳಿತಾಯವಾಗುತ್ತಿದೆ. ಗ್ಯಾರಂಟಿ ಯೋಜನೆಯಿಂದ ನಮಗೆ ಹೆಚ್ಚಿನ ಅನುಕೂಲವಾಗಿದೆ ಎಂದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…