ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕಾರ್ಮಿಕ ಇಲಾಖೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು. ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಅಧಿಕಾರಿಗಳು ನಿಯಮಿತವಾಗಿ ದಾಳಿ ನಡೆಸಿ ಪತ್ತೆಯಾಗುವ ಬಾಲ ಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ಪುನಃ ಶಾಲೆಗೆ ದಾಖಲಿಸಬೇಕು, ಅವರು ವಿದ್ಯಾಭ್ಯಾಸ ಮುಂದುವರಿಸಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಬಾಲ ಕಾರ್ಮಿಕರ ಪೋಷಕರು ಮಕ್ಕಳನ್ನು ಓದಿಸುವ ಸ್ಥಿತಿಯಲ್ಲಿ ಇಲ್ಲದಿದ್ದರೆ ಅಂತಹ ಮಕ್ಕಳನ್ನು ವಸತಿ ಶಾಲೆಗೆ ಸೇರಿಸಲು ಕ್ರಮ ವಹಿಸಿ. ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
ಜಿಲ್ಲೆಯ ರಸ್ತೆ ಬದಿಗಳಲ್ಲಿ ಮಕ್ಕಳು ಭಿಕ್ಷಾಟನೆ ಮಾಡುವುದನ್ನು ತಡೆಯಲು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಿ ಶಿಕ್ಷಣ ನೀಡಲು ಅಽಕಾರಿಗಳು ಸಂಘಟಿತರಾಗಿ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳು ಅನಿರೀಕ್ಷಿತ ದಾಳಿಗಳನ್ನು ನಡೆಸಿ ಭಿಕ್ಷಾಟನೆ ಮಾಡುವ ಮಕ್ಕಳನ್ನು ರಕ್ಷಿಸಿ ಎಂದರು.
ಬಾಲ ಕಾರ್ಮಿಕ ಮಕ್ಕಳು ಹೆಚ್ಚಾಗಿ ಕಂಡು ಬರುವ ಸೂಕ್ಷ್ಮಸ್ಥಳಗಳನ್ನು ಗುರುತಿಸಿ, ಅಂತಹ ಸ್ಥಳಗಳ ಗಣ್ಯವ್ಯಕ್ತಿಗಳ ಅಧ್ಯಕ್ಷತೆಯಲ್ಲಿ ಜಾಗೃತಿ ಶಿಬಿರಗಳನ್ನು ಆಯೋಜಿಸಿ, ಬಾಲ ಕಾರ್ಮಿಕ ಮಕ್ಕಳನ್ನು ಶಾಲೆಗೆ ಕರೆತನ್ನಿ. ಜಿಲ್ಲೆಯಲ್ಲಿ ಹೆಚ್ಚಿನ ಜಾಗೃತಿ ಶಿಬಿರಗಳನ್ನು ಆಯೋಜಿಸಿ ಮುಂದಿನ ಸಭೆಗೆ ಮಾಹಿತಿ ನೀಡಿ ಎಂದರು.
ಜಿಲ್ಲೆಯಲ್ಲಿ 12 ವೃತ್ತಗಳಲ್ಲಿ 2025ರ ಏಪ್ರಿಲ್ ನಿಂದ 2026ರ ಮಾರ್ಚ್ ವರೆಗೆ 1483 ದಾಳಿಗಳನ್ನು ನಡೆಸಿ 3 ಬಾಲ ಕಾರ್ಮಿಕರು, 34 ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಿ 12 ಪ್ರಕರಣಗಳಲ್ಲಿ 1,62000 ರೂ. ದಂಡ ವಸೂಲು ಮಾಡಲಾಗಿದೆ ಎಂದರು.
ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತೆ ಲಲಿತಾ ಬಾಯಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಕೆ.ಬಿ.ಲಿಂಗರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಯೋಗೇಶ್ ಕುಮಾರ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…