ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.
ಕ್ಯಾತಮಾರನಹಳ್ಳಿ ನಿವಾಸಿ ಸತೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ನಿನ್ನೆ ಸಂಜೆ ಬಣ್ಣ ಹೊಡೆಯುವ ವೇಳೆ ಕೆಳಗೆ ಬಿದ್ದ ಸತೀಶ್ ಸ್ಥಳದಲ್ಲೇ ಅಸುನೀಗಿದ್ದಾರೆ.
ಸತೀಶ್‌ನನ್ನು ಕಂಟ್ರಾಕ್ಟರ್ ದೀಪಕ್ ಎಂಬಾತ ಬಣ್ಣ ಹೊಡೆಯಲು ಕರೆದುಕೊಂಡು ಬಂದಿದ್ದ ಎನ್ನಲಾಗಿದ್ದು, ಮೃತ ಸತೀಶ್ ಸಂಬಂಧಿಕರು ದೀಪಕ್ ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





