ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ವಿಕಲಚೇತನ ಮಕ್ಕಳೊಂದಿಗೆ ವಿಶ್ವ ಆನೆಗಳ ದಿನವನ್ನು ಆಚರಣೆ ಮಾಡಲಾಯಿತು.
ಇಂದು ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅರಣ್ಯ ಇಲಾಖೆ ವತಿಯಿಂದ ವಿಶೇಷ ಚೇತನ ಹಾಗು ಅನಾಥಾಶ್ರಮದ ಮಕ್ಕಳೊಂದಿಗೆ ವಿಭಿನ್ನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆ ಬಳಿಯೇ ಕಾರ್ಯಕ್ರಮ ಆಯೋಜಿಸಿ ಡಿಸಿಎಫ್ ಡಾ. ಪ್ರಭುಗೌಡ ಅವರು ಮಕ್ಕಳಿಗೆ ಆನೆಗಳ ಬಗ್ಗೆ ಮಾಹಿತಿ ನೀಡಿದರು.
ಬಳಿಕ ದಸರಾ ಗಜಪಡೆಯನ್ನು ಕಣ್ತುಂಬಿಕೊಂಡು ಸಂಭ್ರಮಿಸಿದ ಮಕ್ಕಳು, ಬಲಶಾಲಿ ಆನೆ ಭೀಮನನ್ನು ಮುಟ್ಟಿ, ಕಬ್ಬು ತಿನ್ನಿಸಿ ಅತೀವ ಸಂತಸಪಟ್ಟರು.





