dasara
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ 14 ಆನೆಗಳು, ಅವುಗಳ ಮಾವುತರು ಮತ್ತು ಕಾವಾಡಿಗರು ತಲಾ 14 ಮಂದಿ, ಅರಣ್ಯ ಸಿಬ್ಬಂದಿ ಸೇರಿದಂತೆ ಒಟ್ಟು 43 ಜನರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.
ಗಜಪಯಣದಿಂದ ಜಂಬೂಸವಾರಿ ಪೂರ್ಣಗೊಳಿಸಿ ಮತ್ತೆ ಕಾಡಿಗೆ ತೆರಳುವವರೆಗೆ ವಿಮೆ ಸೌಲಭ್ಯ ಜಾರಿಯಲ್ಲಿರುತ್ತದೆ. ಇದಕ್ಕಾಗಿ ಜಿಲ್ಲಾಡಳಿತ ವತಿಯಿಂದ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಗೆ 67,000 ರೂ ಪ್ರೀಮಿಯಂ ಪಾವತಿಸಲಾಗಿದೆ.
ಅಂಬಾರಿ ಹೊರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಎಲ್ಲಾ ಗಂಡಾನೆಗಳಿಗೆ ಒಟ್ಟು 50 ಲಕ್ಷ ವಿಮೆ ಮಾಡಿಸಲಾಗಿದ್ದು, ಹೆಣ್ಣಾನೆಗಳಿಗೆ 18 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.
ಸಿಬ್ಬಂದಿ, ಕಾವಾಡಿಗರು, ಮಾವುತರು, ವಿಶೇಷ ಮಾವುತರು, ಸಹಾಯಕರು, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯ ಅಧಿಕಾರಿ, ಪಶುವೈದ್ಯಾಧಿಕಾರಿ, ಸಹಾಯಕರು ಸೇರಿದಂತೆ ಒಟ್ಟು 43 ಮಂದಿಗೆ 86 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.
ಇನ್ನು ದಸರಾ ಆನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ದಸರಾ ಆನೆಗಳಿಂದ ನಷ್ಟವಾದರೂ ಇದಕ್ಕೆ 50 ಲಕ್ಷ ರೂ ವಿಮೆ ಪರಿಹಾರ ಸಿಗಲಿದೆ.
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…