ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.
ನಾಳೆ ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ನಾಳೆ ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಗುರುವಾರದಂದು ಬೆಳಿಗ್ಗೆ 8.30ಕ್ಕೆ ಮೈಸೂರಿನ ಗಾಂಧಿ ಸ್ಕ್ವೇರ್ ಬಳಿ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಪ್ರವಾಸಿಗರಿಗೆ ಭರಪೂರ ಮನರಂಜನೆ
ತದನಂತರದಲ್ಲಿ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಆದಾದ ಬಳಿಕ ಮಧ್ಯಾಹ್ನ 1 ಗಂಟೆಗೆ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆಯ ಆವರಣದಲ್ಲಿರುವ ಬಲರಾಮ ದ್ವಾರದ ಬಳಿ ನಂದಿಧ್ವಜ ಪೂಜೆ ನೆರವೇರಿಸಲಿದ್ದಾರೆ.
ಇದಾದ ನಂತರ ಸಿಎಂ ಸಿದ್ದರಾಮಯ್ಯ ಅವರು ಸಂಜೆ ವೇಳೆಗೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪದಲ್ಲಿ ಪಂಜಿತ ಕವಾಯತು ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.





