ಮೈಸೂರು ನಗರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣಕ್ಕೆ ಗಜಪಡೆ ಎಂಟ್ರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಜಂಬೂಸವಾರಿಯ ಗಜಪಡೆಗಳಿಗೆ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಿ ಅರಮನೆ ಅವರಣಕ್ಕೆ ಬರ ಮಾಡಿಕೊಳ್ಳಲಾಯಿತು.

ಮೈಸೂರಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇಂದು ಸಂಜೆ 6:45ರ ಗೊಧೋಳಿ ಲಗ್ನದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಹಾಗೂ ಅದರೊಂದಿಗೆ ಭೀಮ, ಕಂಜನ್, ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಕಾವೇರಿ ಹಾಗೂ ಲಕ್ಷ್ಮೀ ಆನೆಗಳಿಗೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಪುಷ್ಪಾರ್ಚನೆ ಮಾಡುವ ಮುಖಾಂತರ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

ಎಂದಿನಂತೆ ಪೊಲೀಸ್ ವಂದನೆ ಸ್ವೀಕರಿಸಿ ಮೊದಲ ತಂಡದ ಎಲ್ಲಾ ಆನೆಗಳು ಅರಮನೆ ಪ್ರವೇಶಿಸಿದವು. ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ತಂಡಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದವು. ಸಾರ್ವಜನಿಕರು ಕೂಡ ಕಾರ್ಯಕ್ರಮವನ್ನು ವೀಕ್ಷಿಸಿ ಖುಷಿಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್‌, ಶಾಸಕರಾದ ತನ್ವೀರ್‌ ಸೇಠ್‌, ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

2 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

2 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

3 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

4 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

4 hours ago