ಮೈಸೂರು ನಗರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಆಗಸ್ಟ್.10ರಂದು ಅರಮನೆ ಪ್ರವೇಶಿಸಲಿರುವ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.‌10ರಂದು ಅರಮನೆಗೆ ಪ್ರವೇಶಿಸಲಿವೆ.

ಆಗಸ್ಟ್.‌10ರ ಭಾನುವಾರ ಸಂಜೆ 6.45 ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಗಜಪಡೆಗಳು ಅರಮನೆ ಪ್ರವೇಶಿಸಲಿದ್ದು, ಇದನ್ನು ಸಾರ್ವಜನಿಕರು ಕೂಡ ಕಣ್ತುಂಬಿಕೊಳ್ಳಬಹುದಾಗಿದೆ.

ಈಗಾಗಲೇ ಅರಮನೆ ಆವರಣದಲ್ಲಿ ದಸರಾ ಗಜಪಡೆಗಳು, ಮಾವುತರು ಹಾಗೂ ಕಾವಾಡಿಗರ ವಾಸ್ತವ್ಯಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದ್ದು, ಭಾನುವಾರದಿಂದ ನಾಡಹಬ್ಬ ದಸರಾ ಮಹೋತ್ಸವ ಮುಗಿಯುವವರೆಗೂ ಆನೆಗಳು ಅರಮನೆ ಆವರಣದಲ್ಲೇ ಬೀಡುಬಿಡಲಿವೆ.

ನಿತ್ಯ ಬೆಳಿಗ್ಗೆ ಹಾಗೂ ಸಂಜೆ ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತದೆ. ವಿಜಯದಶಮಿ ಜಂಬೂಸವಾರಿ ದಿನದಂದು ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ರಾಜಬೀದಿಯಲ್ಲಿ ಹೆಜ್ಜೆ ಹಾಕಲಿದ್ದಾನೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

5 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

5 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

5 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

7 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

9 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

14 hours ago