ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ.
ಮೈಸೂರಿನ ಮಹಾರಾಜ ಮೈದಾನ ಮುಂಭಾಗದ ಮರದ ಕೊಂಬೆಗಳಿಗೆ ನೀರಿನ ಬೌಲ್ ಅಳವಡಿಕೆ ಮಾಡಲಾಗಿದ್ದು, ಬೇಸಿಗೆ ವೇಳೆ ಪಕ್ಷಿಗಳಿಗೆ ಕುಡಿಯುವ ನೀರು ಹಾಗೂ ಕಾಳಿನ ವ್ಯವಸ್ಥೆ ಮಾಡಲಾಗಿದೆ. ಪರಿಸರ ಸ್ನೇಹಿ ತಂಡ, ಕೆಎಂಪಿಕೆ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹತ್ತಾರು ಮಂದಿ ಭಾಗಿಯಾಗಿ ನೀರಿನ ಬೌಲ್ ಅಳವಡಿಕೆ ಮಾಡಿ ಪಕ್ಷಿ ಸಂಕುಲ ರಕ್ಷಣೆಗೆ ಪಣ ತೊಟ್ಟರು.
ಈ ಬಾರಿ ಬೇಸಿಗೆ ವೇಳೆ ಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ. ನಗರ ಪ್ರದೇಶಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು, ಆಹಾರದ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಪಕ್ಷಿಗಳಿಗೆ ನೀರು ಆಹಾರ ನೀಡುವ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಮಾಡುತ್ತಿದ್ದೇವೆ. ಮೈಸೂರಿಗರು ಕೂಡ ತಮ್ಮ ಮನೆಯ ಟೆರೇಸ್‌ಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲವನ್ನು ರಕ್ಷಣೆ ಮಾಡುವ ಕೆಲಸ ಮಾಡಿ ಎಂದು ಕೆಎಂಪಿಕೆ ಟ್ರಸ್ಟ್ ನ ವಿಕ್ರಮ್ ಅಯ್ಯಂಗಾರ್ ಮನವಿ ಮಾಡಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…