ಮೈಸೂರು ನಗರ

ಉಪಜಾತಿ ಕಾಲಂನಲ್ಲೂ ಮಾದಿಗ ಎಂದೇ ಬರೆಯಿಸಿ: ಎಂಎಲ್‌ಸಿ ಡಾ.ತಿಮ್ಮಯ್ಯ ಮನವಿ

ಮೈಸೂರು: ಉಪಜಾತಿ ಕಾಲಂನಲ್ಲಿ ಮಾದಿಗ ಎಂದು, ಧರ್ಮದ ಕಾಲಂನಲ್ಲೂ ಹಿಂದೂ ಧರ್ಮ ಎಂದು ಬರೆಸಿ ಎಂದು ವಿಧಾನಪರಿಷತ್‌ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿರಿಯ ಸಾಹಿತಿ ಎಸ್.‌ಎಲ್.ಭೈರಪ್ಪ ನಿಧನಕ್ಕೆ ಮೊದಲಿಗೆ ಸಂತಾಪ ಸಲ್ಲಿಸುತ್ತೇವೆ. ಅವರ ನಿಧನ ಇಡೀ ರಾಜ್ಯ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.

ಇದನ್ನು ಓದಿ : ಒಳ ಮೀಸಲಾತಿ ವರದಿ ಜಾರಿ-ಗೊಂದಲಗಳಿಗೆ ದಾರಿ

ಬಳಿಕ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ನಾಗಮೋಹನ್ ದಾಸ್ ನೇತೃತ್ವ ಒಳ ಮೀಸಲಾತಿ ಸಮೀಕ್ಷೆಯಲ್ಲಿ ತಾವೆಲ್ಲರೂ ಮಾಹಿತಿ ನೀಡಿದ್ದೀರಾ. ಇದೀಗ ಮತ್ತೆ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪ್ರಾರಂಭ ಆಗಿದೆ. ಈ ಸಮೀಕ್ಷೆಯಲ್ಲಿ ಮಾದಿಗ ಸಮುದಾಯ ಭಾಗಿಯಾಗಬೇಕು. ಸಮೀಕ್ಷೆಗೆ ವೇಳೆ ಅಧಿಕಾರಿಗಳು ಬಂದಾಗ ಎಲ್ಲಾ ಮಾಹಿತಿಗಳನ್ನು ನೀಡಿ. ಬಿ-061 ಕಾಲಂನಲ್ಲಿ ಎಲ್ಲರೂ ಮಾದಿಗ ಸಮುದಾಯ ಎಂದು ಬರೆಸಬೇಕು.
ಉಪಜಾತಿ ಕಾಲಂನಲ್ಲೂ ಮಾದಿಗ ಎಂದೇ ಬರೆಯಿಸಿ. ಧರ್ಮದ ಕಾಲಂನಲ್ಲಿ ಹಿಂದೂ ಧರ್ಮ ಅಂತಲೇ ಬರೆಸಬೇಕು. ಈ ಸಮೀಕ್ಷೆ ನಮ್ಮ ಅಳಿವು ಉಳಿವಿನ ಪ್ರಶ್ನೆ. ಈ ಸಮೀಕ್ಷೆಯಲ್ಲಿ ನಮ್ಮ ಸಮಾಜದ ಪರಿಸ್ಥಿತಿ ಹೇಗಿದೆ ಎಂಬುದು ಗೊತ್ತಾಗುತ್ತದೆ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

48 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

59 mins ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

1 hour ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

1 hour ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

2 hours ago