ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದು, ಪತ್ರ ಬರೆದ ಕಾರಣಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಾಯಿ ನಮಗೆ ಸೇರಿದ ಜಾಗವಿದೆ ಎಂದು ಪತ್ರ ಬರೆದಿದ್ದಾರೆ. ಈ ಪತ್ರದಿಂದ ಆ ಭಾಗದ ಜನರು ಆತಂಕ ಪಡುವ ಅಗತ್ಯವಿಲ್ಲ. ನನ್ನಿಂದ ಅಥವಾ ನನ್ನ ತಾಯಿಯಿಂದ ಯಾವುದೇ ಅನಾನುಕೂಲವಾಗುವುದಿಲ್ಲ. ಅಲ್ಲಿನ ಜನರಿಗೆ ನಾವು ಯಾವುದೇ ತೊಂದರೆ ಕೊಡಲ್ಲ. ಜಿಲ್ಲಾಧಿಕಾರಿ ಅವರು ವರದಿ ಕೊಡಲಿ. ಅದನ್ನು ಬಿಟ್ಟು ಕೆಲವರು ಆತಂಕ ಸೃಷ್ಟಿ ಮಾಡಲು ಹೊರಟಿದ್ದಾರೆ. ನಮ್ಮಿಂದ ಅಲ್ಲಿನ ಜನಕ್ಕೆ ತೊಂದರೆ ಆಗಲ್ಲ.
ನಮ್ಮ ಆಸ್ತಿ ಜಮೀನು ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ. ಮೊದಲು ಜಿಲ್ಲಾಧಿಕಾರಿ ಅವರಿಂದ ವರದಿ ಬರಲಿ. ಅಲ್ಲಿನ ಜನರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ವರದಿ ಬಂದ ನಂತರ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ನಮ್ಮಿಂದ ಯಾವುದೇ ಜನರಿಗೆ ಅನಾನುಕೂಲವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…