ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶದ ಸಮಸ್ತ ಜನರು 3 ಬಾರಿ ಆಯ್ಕೆ ಮಾಡಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಸ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ಪೂರೈಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಮೋದಿ ಅಧಿಕಾರಕ್ಕೆ ಬಂದಾಗಿನಿಂದ ತೆರಿಗೆಯಲ್ಲಿ ಪರಿವರ್ತನೆಯಾಗಿದೆ.
ಕೃಷಿ ಕ್ಷೇತ್ರಕ್ಕೆ ಅನೇಕ ಕೊಡುಗೆ ತಂದಿದ್ದಾರೆ. ಕಳೆದ 10 ವರ್ಷಗಳಲ್ಲಿ ಜನರ ಹಿತದೃಷ್ಟಿಯಿಂದ ಅನೇಕ ಯೋಜನೆ ಜಾರಿಗೆ ಬಂದಿದೆ. ಕಳೆದ ಒಂದು ವರ್ಷದಲ್ಲಿ ಬಹಳಷ್ಟು ಘಟನೆ ಜರುಗಿವೆ. ಅದನ್ನೆಲ್ಲಾ ಪ್ರಧಾನಿ ನರೇಂದ್ರ ಮೋದಿ ಸಮರ್ಥವಾಗಿ ಎದುರಿಸಿದ್ದಾರೆ. ಮುಂದೆಯೂ ಅನೇಕ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.





