ಮೈಸೂರು: ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಯೋತ್ಪಾದಕ ಚಟುವಟಿಕೆ ಮುಂದುವರಿದರೆ ವ್ಯಾಪಾರ ವ್ಯವಹಾರ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಪಾಕಿಸ್ತಾನ ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧ ಇವೆ. ಇಸ್ಲಾಮಿಕ್ ರಾಷ್ಟ್ರಗಳು ಕೂಡ ಉಗ್ರರ ಕೃತ್ಯಗಳನ್ನು ಖಂಡಿಸಿವೆ. ಪಾಕಿಸ್ತಾನದ ಭಯೋತ್ಪಾದಕ ಕೃತ್ಯಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ನಾವು ಪಾಕಿಸ್ತಾನದೊಳಕ್ಕೆ ನುಗ್ಗಿ ಹೊಡೆದಿದ್ದೇವೆ. ಯಾವುದೇ ಪರಿಸ್ಥಿತಿ ಎದುರಾದರೂ ಭಾರತ ಸರ್ವ ಸನ್ನದ್ದವಾಗಿದೆ ಎಂಬ ಸಂದೇಶವನ್ನು ಭಾರತ ವಿಶ್ವಕ್ಕೆ ರವಾನಿಸಿದೆ ಎಂದರು.
ಇದನ್ನೂ ಓದಿ:- ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 AMBULANCEಗಳ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್





