ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಆತುರದ ನಿರ್ಧಾರದಿಂದಲೇ ಈ ದುರಂತ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡು 2 ದಿನಗಳ ನಂತರ ಸಂಭ್ರಮಾಚರಣೆ ಮಾಡಬಹುದಿತ್ತು. ಪೂರ್ವ ತಯಾರಿ ಮಾಡಿಕೊಂಡು ಚೆನ್ನಾಗಿ ಸಂಭ್ರಮಾಚರಣೆ ಮಾಡಬಹುದಿತ್ತು. ರಾಜ್ಯ ಸರ್ಕಾರ ಆತುರದ ನಿರ್ಧಾರ ಮಾಡಿದೆ. ಇಂಟೆಲಿಜೆನ್ಸ್ ಪೇಲ್ಯೂರ್ ಎಂದು ನಾನು ಈಗಲೇ ಹೇಳಲ್ಲ. ಸಾವಿನ ಬಗ್ಗೆ ತನಿಖೆ ಆಗಲಿ ಎಂದು ಆಗ್ರಹಿಸಿದ ಅವರು, ಮೃತರ ಕುಟುಂಬಕ್ಕೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದರು.





