ಮೈಸೂರು: ಪಾಕಿಸ್ತಾನ ತನ್ನ ಕೃತ್ಯಗಳನ್ನು ನಿಲ್ಲಿಸಿದರೆ ಮಾತ್ರ ವಿಶ್ವದಲ್ಲಿ ಶಾಂತಿ ಕಾಣಬಹುದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘಟನೆಗೆ ಪ್ರಧಾನಿ ಮೋದಿ ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ. ಪಾಕ್‌ನ 9 ಭಯೋತ್ಪಾದಕ ಶಿಬಿರವನ್ನು ಗುರುತಿಸಿ ದಾಳಿ ಮಾಡಿ ಪ್ರತಿಕಾರ ತೀರಿಸಿಕೊಂಡಿದ್ದಾರೆ. ಪಾಕಿಸ್ತಾನ ಏನೇ ಪ್ರಯತ್ನ ಮಾಡಿದ್ರು ಅವರ ಪ್ರಯತ್ನಗಳನ್ನ ಮೊಟುಕುಗೊಳಿಸುವ ಕೆಲಸವನನು ಭಾರತ ಸರ್ಕಾರ ಮಾಡಿಯೇ ತೀರುತ್ತದೆ. ಪಾಕಿಸ್ತಾನದ ಎಲ್ಲಾ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಭಯೋತ್ಪಾದನೆಗೆ ಅವಕಾಶ ಕೊಡದೆ ವಿಶ್ವದಾದ್ಯಂತ ಉಗ್ರವಾದ ತೊಲಗಿಸಬೇಕು. ಪಾಕಿಸ್ತಾನಿಯರು ಅವರ ಕೃತ್ಯಗಳನ್ನ ನಿಲ್ಲಿಸಿದರೆ ಮಾತ್ರ ವಿಶ್ವದಲ್ಲಿ ಶಾಂತಿ ಕಾಣಬಹುದು ಎಂದು ಅಭಿಪ್ರಾಯ ಪಟ್ಟರು.
ಇನ್ನು ಭಾರತ ಪಾಕ್ ಯುದ್ಧದ ಕ್ರೆಡಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯುದ್ದದ ಕ್ರೆಡಿಟ್ ಸೈನಿಕರಿಗೂ ಸಲ್ಲಬೇಕು ಪ್ರಧಾನಿ ಮೋದಿಗೂ ಸಲ್ಲಬೇಕು. ಈ ಸಂದರ್ಭದಲ್ಲಿ ರಾಜಕೀಯ ಮಾಡೋದು ಸರಿಯಿಲ್ಲ. ರಾಜಕೀಯ ಮಾಡುವ ಅಗತ್ಯ ಇಲ್ಲ. ಕಾಂಗ್ರೆಸ್‌ನವರಿಗೆ ಸಂದೇಶ ಕೊಡುವ ಸ್ಥಾನದಲ್ಲೂ ನಾನಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಎಲ್ಲರೂ ಒಟ್ಟಾಗಿರಬೇಕು. ಎಲ್ಲರೂ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕೈಜೋಡಿಸಿ ನಿಲ್ಲಬೇಕು. ಅಂದಿನ ಕಾಲಕ್ಕೆ ತಕ್ಕಂತೆ ಇಂದಿರಾ ಗಾಂಧಿ ಕೆಲಸ ನಿರ್ವಹಿಸಿದ್ದಾರೆ. ಇಂದಿನ ಕಾಲಕ್ಕೆ ತಕ್ಕಂತೆ ಪ್ರಧಾನಿ ಮೋದಿ ಉತ್ತಮ ನಿರ್ಧಾರದಲ್ಲಿ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ ಎಂದರು.





