ಮೈಸೂರು ನಗರ

ಉಪರಾಷ್ಟ್ರಪತಿ ಚುನಾವಣೆ ಗೆದ್ದ ರಾದಾಕೃಷನ್‌ಗೆ ಯದುವೀರ್‌ ಶುಭಾಶಯ

ಪ್ರಜಾಪ್ರಭುತ್ವ ಸಂರಕ್ಷಣೆಗೆ ಉಪರಾಷ್ಟ್ರಪತಿಗಳು ಕೊಡುಗೆ ನೀಡುವ ಭರವಸೆ ಇದೆ ಎಂದ ಸಂಸದರು

ಮೈಸೂರು: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಅವರು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಸಂರಕ್ಷಣೆ ತೋರುವ ವಿಶ್ವಾಸವಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳನ್ನು ಪಡೆದಿರುವ ರಾಧಾಕೃಷ್ಣನ್‌ ಅವರು 300 ಮತಗಳನ್ನು ಪಡೆದಿರುವ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್‌ ರೆಡ್ಡಿ ವಿರುದ್ಧ ಜಯಗಳಿಸಿದ್ದಾರೆ.

ರಾಧಾಕೃಷ್ಣನ್‌ ಅವರಿಗೆ ಸಂಸದರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

“ರಾಧಾ ಕೃಷ್ಣನ್ ಅವರ ಆಯ್ಕೆ ನಮ್ಮ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಪ್ರಜಾಪ್ರಭುತ್ವ ಸಂಸ್ಥೆಗಳ ಬಲಿಷ್ಠತೆಗೆ ಸಾಕ್ಷಿಯಾಗಿದೆ. ಅವರ ಗೆಲುವು ಅವರ ನಾಯಕತ್ವ, ಸಮಗ್ರತೆ ಮತ್ತು ಸಾರ್ವಜನಿಕ ಸೇವೆಗೆ ಬದ್ಧತೆ ತೋರುವ ಅವರ ಅಚಲ ನಂಬಿಕೆಗೆ ಮತ್ತಷ್ಟು ಮೆರುಗು ದೊರೆತಿದೆ” ಎಂದು ಯದುವೀರ್ ಒಡೆಯರ್ ತಮ್ಮ ಸಂದೇಶದಲ್ಲಿ ವಿವರಿಸಿದ್ದಾರೆ.

“ಉಪರಾಷ್ಟ್ರಪತಿಯಾಗಿ ರಾಧಾ ಕೃಷ್ಣನ್ ಸಂಸತ್ತಿನ ಘನತೆಯನ್ನು ಎತ್ತಿಹಿಡಿಯುವಲ್ಲಿ ಮತ್ತು ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಅನುಭವ ಮತ್ತು ದೃಷ್ಟಿಕೋನವು ದೇಶವನ್ನು ಸಮಗ್ರ ಬೆಳವಣಿಗೆ ಮತ್ತು ಸ್ಥಿರತೆಯತ್ತ ಕೊಂಡೊಯ್ಯುತ್ತದೆ ಎಂಬ ವಿಶ್ವಾಸ ನನಗಿದೆ” ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ.

ಇಂದಿನ ರಾಜಕೀಯ ಮತ್ತು ಸಾಮಾಜಿಕ ವಾತಾವರಣದಲ್ಲಿ ರಾಧಾಕೃಷ್ಣನ್‌ ಅವರ ನಾಯಕತ್ವ ಅತ್ಯಂತ ಮಹತ್ತದ್ದಾಗಿದ್ದು, ಮೌಲ್ಯಯುತವೂ ಆಗಿದೆ ಎಂದು ತಿಳಿಸಿದ್ದಾರೆ.

“ನಿಷ್ಠೆ, ಜವಾಬ್ದಾರಿ ಮತ್ತು ಸಮರ್ಪಣಾ ಭಾವನೆ ಹೊಂದಿರುವ ರಾಧಾಕೃಷ್ಣನ್‌ ದೇಶ ಸೇವೆಯಲ್ಲಿ ಯಶಸ್ವಿಯಾಗಲಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

2 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

3 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

5 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

5 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

7 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

7 hours ago