ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ
ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನ ನರೇಂದ್ರ ಮೋದಿ ಅವರನ್ನು ನಿಂದಿಸುವ ವೀಡಿಯೋಗಳನ್ನು ಹರಿಯಬಿಟ್ಟಿರುವ ಫಾಹಾದ್, ಬಾಸಿಲ್, ಸಮೀರ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟು ಮಾತ್ರ ಸಾಲದು ಇವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಯದುವೀರ್ ಆಗ್ರಹಿಸಿದರು.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಸದರು, ಇಂಥವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಕ್ಕ ಪಾಠ ಕಲಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗ ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದರು.
ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ
ಈ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಜಾರಿಯಾದರೆ ಮುಂದೆ ಇಂಥ ಅಪರಾಧ ಎಸಗಲು ಭೀತಿ ಉಂಟಾಗಬೇಕು. ಈ ಸಂಬಂಧ ಪೊಲೀಸ್ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದು, ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ವಿವರಿಸಿದರು.
ದೇಶದ ಪ್ರಧಾನಮಂತ್ರಿಯನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಆಗ್ರಹಿಸಿದ ನಾಳೆಯಿಂದ ಬಿಜೆಪಿ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…