ಮೈಸೂರು ನಗರ

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ

ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೂಚನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನ ನರೇಂದ್ರ ಮೋದಿ ಅವರನ್ನು ನಿಂದಿಸುವ ವೀಡಿಯೋಗಳನ್ನು ಹರಿಯಬಿಟ್ಟಿರುವ ಫಾಹಾದ್‌, ಬಾಸಿಲ್‌, ಸಮೀರ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟು ಮಾತ್ರ ಸಾಲದು ಇವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಯದುವೀರ್‌ ಆಗ್ರಹಿಸಿದರು.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಸದರು, ಇಂಥವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಕ್ಕ ಪಾಠ ಕಲಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗ ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದರು.

ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚೆ

ಈ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಜಾರಿಯಾದರೆ ಮುಂದೆ ಇಂಥ ಅಪರಾಧ ಎಸಗಲು ಭೀತಿ ಉಂಟಾಗಬೇಕು. ಈ ಸಂಬಂಧ ಪೊಲೀಸ್‌ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದು, ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ವಿವರಿಸಿದರು.

ದೇಶದ ಪ್ರಧಾನಮಂತ್ರಿಯನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಆಗ್ರಹಿಸಿದ ನಾಳೆಯಿಂದ ಬಿಜೆಪಿ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಸಂಸದ ಯದುವೀರ್‌ ಒಡೆಯರ್ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago