ಮೈಸೂರು ನಗರ

ನಮ್ಮ ಪೂರ್ವಿಕರು ಜನರ ಭವಿಷ್ಯದ ದೃಷ್ಟಿಯಿಂದ ಕೆಲಸ ಮಾಡಿದ್ದಾರೆ: ಯತೀಂದ್ರಗೆ ಟಾಂಗ್‌ ಕೊಟ್ಟ ಸಂಸದ ಯದುವೀರ್‌

ಮೈಸೂರು: ಮಹಾರಾಜರಿಗಿಂತ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕರೆ ಜನರಿಗೋಸ್ಕರ ಕೆಲಸ ಮಾಡಬೇಕು. ಅದೇನು ಪಂದ್ಯಾವಳಿ ಅಲ್ಲ. ನಮ್ಮ ಕಾಲದಲ್ಲಿ ಜನರಿಗೆ ಕೊಟ್ಟ ಮಾತುಗಳಂತೆ ಕೆಲಸ ಮಾಡಬೇಕಿದೆ. ಅದನ್ನು ಬಿಟ್ಟು ಹೋಲಿಕೆ ಮಾಡಿಕೊಂಡು ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ ಎಂದು ಒಡೆಯರ್‌ ಹೇಳಿದರು.

ರಾಜಪ್ರಭುತ್ವ ಪ್ರಜಾಪ್ರಭುತ್ವ ಯಾವುದೇ ಇದ್ರು ಜನರಿಗೋಸ್ಕರ ಕೆಲಸ ಮಾಡೋದು ಅಷ್ಟೇ. ನಾಲ್ವಡಿ, ಚಾಮರಾಜ ಒಡೆಯರ್ ಮಾಡಿರುವ ಕೆಲಸ ಜನರ ಹಿತಕ್ಕಾಗಿ. ಅವರು ತೋರಿಕೆಗೋಸ್ಕರ ಕೆಲಸ ಮಾಡಿಲ್ಲ. ಆದರಿಂದ ಈಗ ಒಂದು ಸರ್ವೇ ಮಾಡಲಿ. ಯಾರು ಏನೆಲ್ಲಾ ಕೆಲಸ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ.

ಇದಕ್ಕೆ ಜನರು ಕೂಡ ಉತ್ತರ ಕೊಡ್ತಾರೆ. ನಮ್ಮ ವಂಶದ ಬಗ್ಗೆ ನಾನು ಮಾತನಾಡುವುದರಲ್ಲಿ ಅರ್ಥ ಅಲ್ಲ. ಫೀಲ್ಡಿಗೆ ಇಳಿದು ಜನರ ಬಳಿ ಸರ್ವೇ ಮಾಡಿದ್ರೆ ಎಲ್ಲದಕ್ಕೂ ಉತ್ತರ ಸಿಗುತ್ತದೆ. ಇಂತಹ ಹೇಳಿಕೆಗಳಿಂದ ಜನರನ್ನು ಡೈವರ್ಟ್ ಮಾಡೋದೆ ಕಾಂಗ್ರೆಸ್‌ ಕೆಲಸ. ನಮ್ಮ ಪೂರ್ವಿಕರು ಜನರ ಭವಿಷ್ಯದ ಬಗ್ಗೆ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ.

ಕಾಂಗ್ರೆಸ್‌ನವರು ಬೀದಿಗಿಳಿದು ನೋಡಿದ್ರೆ ಯಾರ ಯಾರ ಕೆಲಸ ಏನು ಎಂಬುದು ಗೊತ್ತಾಗುತ್ತದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

15 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

15 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

15 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

16 hours ago