ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ.
ಬಿಜೆಪಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯತೀಂದ್ರ ವರ್ಗಾವಣೆ ಹಾಗೂ ಕಮಿಷನ್ ದಂಧೆ ಸಚಿವ ಎಂಬ ಪೋಸ್ಟ್ ಮಾಡಿತ್ತು. ಯತೀಂದ್ರ ಸಿದ್ದರಾಮಯ್ಯ ಅವರನ್ನು ಪ್ರತಾಪ್ ಸಿಂಹ ವರ್ಗಾವಣೆ ಸಚಿವರು ಎಂದು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ನಿಯೋಗವು ಪೊಲೀಸ್ ಕಮಿಷನರ್‌ಗೆ ದೂರು ನೀಡಿದೆ. ಬಿಜೆಪಿ ಐಟಿ ಸೆಲ್ ಹಾಗೂ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿಜೆ ವಿಜಯ್ ಕುಮಾರ್ ಸೇರಿದಂತೆ ಹಲವರು ಕಾಂಗ್ರೆಸ್ ಮುಖಂಡರು ದೂರು ಸಲ್ಲಿಕೆ ಮಾಡಿದ್ದಾರೆ.





