ಮೈಸೂರು: ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಆರು ವರ್ಷ ಪಕ್ಷದಿಂದ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಪಕ್ಷದ ಶಿಸ್ತು ಪಾಲಿಸುತ್ತಿರಲಿಲ್ಲ. ಸದನದಲ್ಲೂ ಯಾರಿಗೂ ಗೌರವ ಕೊಡುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಸೂಕ್ತ ಕ್ರಮಕೈಗೊಂಡಿದೆ. ಇದು ಎಲ್ಲಾ ಪಕ್ಷದವರಿಗೂ ಪಾಠವಾಗಬೇಕು. ನಮ್ಮಂತಹ ಕಿರಿಯ ಶಾಸಕರಿಗೆ ಇದು ಎಚ್ಚರಿಕೆಯ ಘಂಟೆಯಾಗಿದೆ ಎಂದರು.
ಇನ್ನು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ನನಗೂ ಅಚ್ಚರಿ ತಂದಿದೆ. ಯಾವ ಕಾರಣಕ್ಕೆ ಭೇಟಿ ಮಾಡಿದ್ದಾರೆ ಆ ಬಗ್ಗೆ ನನಗೆ ಗೊತ್ತಿಲ್ಲ. ಅವರೇ ಬೆಂಗಳೂರಿಗೆ ಬಂದ ಮೇಲೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ. ನಾಳೆ ಅವರು ಯಾವ ಕಾರಣಕ್ಕೆ ಎಚ್‌ಡಿಕೆಯನ್ನು ಭೇಟಿ ಮಾಡಿದ್ದರು ಎಂದು ತಿಳಿಯಲಿದೆ ಎಂದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…