ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಮಾತನಾಡಿರುವ ಶಾಸಕ ಜಿ.ಟಿ ದೇವೇಗೌಡ, ಜೆಡಿಎಸ್ ಟಿಕೆಟ್ ಕೊಡದಿದ್ದರೇ ನೀವು ಹೇಳಿದಂತೆ ಕೇಳುತ್ತೇನೆ ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ. ಇಲ್ಲೇ ಇರುತ್ತೇನೆ ಜೆಡಿಎಸ್ ಟಿಕೆಟ್ ಕೊಡದಿದ್ದರೆ ಕ್ಷೇತ್ರದ ಜನ ಏನು ಹೇಳುತ್ತಾರೋ ಅದಕ್ಕೆ ಸಿದ್ದ ಎಂದು ಕ್ಷೇತ್ರದ ಜನರನ್ನುದ್ದೇಶಿಸಿ ಹೇಳಿದರು.
ನಾನು ಬೆಳೆಸಿದ್ದವರು, ದುಡ್ಡು ಮಾಡಿದವರು ನನ್ನ ವಿರುದ್ದವೇ ತಿರುಗಿ ಬಿದ್ದಿದ್ದಾರೆ. ಇದು ಇವತ್ತಿನದ್ದಲ್ಲ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಿಮ್ಮ ಜೊತೆ ನಾನು ಇರುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ ಎಂದು ಜಿ.ಟಿ ದೇವೇಗೌಡರು ಕ್ಷೇತ್ರದ ಜನರಿಗೆ ತಿಳಿಸಿದರು.
ಈಗಾಗಲೇ ಜೆಡಿಎಸ್‌ನ ಎಲ್ಲಾ ಸಭೆಗಳಿಗೂ ಜಿಟಿಡಿ ಗೈರಾಗಿದ್ದು, ಜೆಡಿಎಸ್ ವರಿಷ್ಠರು ಕೂಡ ಜಿಟಿಡಿ ಬಿಟ್ಟು ಮುಂದೆ ಹೋಗುವ ಮಾತಾಡಿದ್ದಾರೆ. ಪಕ್ಷದ ಎಲ್ಲಾ ಸಭೆ ಸಮಾರಂಭ, ಫ್ಲೆಕ್ಸ್‌ಗಳಲ್ಲೂ ಜಿಟಿಡಿ ಫೋಟೋಗೆ ಕೊಕ್ ನೀಡಲಾಗಿದೆ. ಈ ಹಂತದಲ್ಲಿ ಜಿಟಿಡಿ ಪ್ರಯೋಗಿಸಿರುವ ಭಾವನಾತ್ಮಕ ದಾಳ ಕ್ಷೇತ್ರದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…