Mysore
25
broken clouds

Social Media

ಸೋಮವಾರ, 18 ಮೇ 2026
Light
Dark

ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಯುವಕನ ಬರ್ಬರ ಹತ್ಯೆ 

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮೈಸೂರಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಸೈಯದ್‌ ಸೋಫಿಯಾನ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.

ಘಟನಾ ಸ್ಥಳಕ್ಕೆ ಉದಯಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Tags:
error: Content is protected !!