ಮೈಸೂರು ನಗರ

ದಸರಾ ಆನೆಗಳ ಸನಿಹಕ್ಕೆ ಹೋಗಿ ಯುವತಿ ರೀಲ್ಸ್‌: ಪ್ರಾಣಿಪ್ರಿಯರ ಆಕ್ರೋಶ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗಳನ್ನು ತಬ್ಬಿಕೊಂಡು ಯುವತಿಯೋರ್ವಳು ರೀಲ್ಸ್‌ ಮಾಡಿರುವ ಘಟನೆ ನಡೆದಿದೆ.

ಆನೆಗಳ ಜೊತೆ ರೀಲ್ಸ್‌ ಮಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

ರಾತ್ರೋರಾತ್ರಿ ಯಾರೂ ಇಲ್ಲದ ವೇಳೆ ಕರಿಕಲ್ಲುತೊಟ್ಟಿ ಮೂಲಕ ಅರಮನೆ ಆವರಣಕ್ಕೆ ಪ್ರವೇಶ ಪಡೆದಿರುವ ಯುವತಿ ಆನೆಗಳು ವಾಸ್ತವ್ಯ ಹೂಡಿದ್ದ ಸ್ಥಳಕ್ಕೆ ಹೋಗಿ ಫೋಟೋಶೂಟ್‌ ಮಾಡಿಸಿದ್ದಾಳೆ. ಮೊಬೈಲ್‌ನ ಫ್ಲ್ಯಾಶ್‌ ಲೈಟ್‌ ಬಳಸಿಕೊಂಡು ರೀಲ್ಸ್‌ ಮಾಡಿ ಇನ್ಸ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾಳೆ.

ನಿಯಮಗಳ ಪ್ರಕಾರ ರಾತ್ರಿ ವೇಳೆ ಆನೆಗಳ ಬಳಿ ಯಾರೂ ಕೂಡ ಹೋಗುವಂತಿಲ್ಲ. ಸದ್ಯ ಈ ವಿಡಿಯೋ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು, ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಯುವತಿ ವಿಡಿಯೋ ಡಿಲೀಟ್‌ ಮಾಡಿದ್ದಾಳೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

33 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

52 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

4 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago