ಮೈಸೂರು ನಗರ

ಮೈಸೂರು| ABVP ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ಮೈಸೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸರ್ಕಾರದ ಬಗ್ಗೆ ಬಿಜೆಪಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಇತ್ತೀಚೆಗೆ ಮೈಸೂರಿನಲ್ಲಿ MDMA ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ ABVP ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ರಾಜ್ಯದಲ್ಲಿ ಡ್ರಗ್ಸ್‌ ದಂಧೆಗೆ ಸಂಪೂರ್ಣ ಬ್ರೇಕ್‌ ಬೀಳಬೇಕು ಎಂದು ಆಗ್ರಹಿಸಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸರ್ಕಾರದ ಬಗ್ಗೆ ಬಿಜೆಪಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನಾ ಜಾಥಾ ನಡೆಸಿದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಬಿಜೆಪಿಯವರು ಮೈಸೂರಿನ ಹೆಸರನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಡ್ರಗ್ಸ್ ತಯಾರಿಸುತ್ತಿದ್ದವರು ಗುಜರಾತ್‌ನವರು. ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವೇ ಇದೆ. ಮೈಸೂರಿನಲ್ಲಿ ಸಿಕ್ಕಿರುವ 4 ಕೋಟಿ ಮೌಲ್ಯದ ಡ್ರಗ್ಸ್‌ನ್ನು 390 ಕೋಟಿ ಮೌಲ್ಯದ್ದು ಎಂದು ಸುಳ್ಳು ಆರೋಪ ಮಾಡಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ.

ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಎಬಿಬಿಪಿ ಮುಖಾಂತರ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದು ವಿದ್ಯಾರ್ಥಿಗಳನ್ನು ಬಿಜೆಪಿ ಕಾರ್ಯಕರ್ತರನ್ನಾಗಿ ರೂಪಿಸುವ ಕಾರ್ಯಕ್ರಮ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸರ್ಕಾರದ ಬಗ್ಗೆ ವಿಷ ಬೀಜ ಬಿತ್ತುವ ಕೆಲಸ ಮಾಡಲಾಗುತ್ತಿದೆ. ಈ ಹಿಂದೆ ಮೈಸೂರಿನ ಉದಯಗಿರಿಯಲ್ಲಿ ನಡೆದ ಸಣ್ಣ ಗಲಾಟೆಯನ್ನು ರಾಜ್ಯಾದ್ಯಂತ ಅನ್ಯಧರ್ಮೀಯರ ವಿರುದ್ಧ ಎತ್ತಿಕಟ್ಟುವ ಕೆಲಸವಾಗಿತ್ತು. ಈಗ ಡ್ರಗ್ಸ್ ವಿಚಾರದಲ್ಲೂ ಅದೇ ರೀತಿ ಆಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago